ಮಜೂರಿನಲ್ಲಿ 3 ತಿಂಗಳ ಉಚಿತ ಟೈಲರಿಂಗ್ ತರಗತಿಗೆ ಚಾಲನೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಚ್ಚಿಲ ವಲಯದ ಮಜೂರು ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮ
(Majuru) ಮಜೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಇದರ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಮಜೂರು ಕಾರ್ಯಕ್ಷೇತ್ರದಲ್ಲಿ 3 ತಿಂಗಳ ಉಚಿತ ಟೈಲರಿಂಗ್ ತರಬೇತಿ ಆರಂಭಿಸಲಾಯಿತು.
ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸದಸ್ಯ ಡಾ. ಫಾರೂಕ್ ಮಹಮ್ಮದ್ ಚಂದ್ರನಗರರವರು ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳನ್ನು ಸಂಯೋಜಿಸುತ್ತಿದೆ. 3 ತಿಂಗಳು ಉಚಿತವಾಗಿ ಟೈಲರಿಂಗ್ ತರಬೇತಿ ನೀಡುವ ಕೆಲ ಸ ಶ್ಲಾಘನೀಯ. ಇದರ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಮನವಿ ಮಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಜೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಕೆ ಸಹನಾ ತಂತ್ರಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸ್ಥಳೀಯರಾದ ಅಬ್ದುಲ್ ರಜಾಕ್, ಟೈಲರಿಂಗ್ ಶಿಕ್ಷಕಿ ಜ್ಯೋತಿ, ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿನುತ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ರಜನಿ ಉಪಸ್ಥಿತರಿದ್ದರು.

