ಮಜೂರು ಗ್ರಾಪಂ : ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ
ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆ
(Majooru) ಮಜೂರು: ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯು ಸೋಮವಾರ ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕಾಪು ತಾಪಂ ಸಹಾಯಕ ಲೆಕ್ಕಾಧಿಕಾರಿ ಶ್ರೀಮತಿ ಸುಗುಣರವರು ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯ ಮಹತ್ವದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾಪು ಪೋಲಿಸ್ ಠಾಣೆಯ ಅಧಿಕಾರಿ ರವೀಶ್ ಹೊಳ್ಳ ರವರು ಸೈಬರ್ ಕ್ರೈಮ್ ನ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಪೂರ್ಣಿಮಾರವರು ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಲೋಚಕರಾದ ಶ್ರೀಮತಿ ಅಂಬಿಕಾ ಮಕ್ಕಳ ಸಾಗಾಣಿಕೆ ಬಗ್ಗೆ ತಿಳಿಸಿದರು.
ಆರೋಗ್ಯ ಇಲಾಖೆಯ ಬಿಎಚ್‌ಇಒ ಶ್ರೀಮತಿ ಚಂದ್ರಕಲಾರವರು ಆರೋಗ್ಯ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ವತಿಯಿಂದ ಮಹಿಳೆಯರು ಮತ್ತು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸಹನಾ ತಂತ್ರಿ, ಸಂದೀಪ್ ರಾವ್, ಶ್ರೀಮತಿ ಶರ್ಮಿಳಾ, ಮಧುಸೂಧನ್ ಸಾಲ್ಯಾನ್, ವಿಜಯ್ ಧೀರಜ್ , ಭಾಸ್ಕರ ಉಪಸ್ಥಿತರಿದ್ದರು.
ಕರಂದಾಡಿ ಶ್ರೀ ರಾಮ ಅನುದಾನಿತ ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ನಾಯಕಿ ವಂಶಿಕಾ ಕುಲಾಲ್, ತಾಲೂಕು ಶಿಕ್ಷಣ ಸಂಯೋಜಕಿ ಶ್ರೀಮತಿ ಬಬಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಲಾಸಿನಿ, ಶಾಲಾ ಮುಖ್ಯೋಪದ್ಯಾಯರಾದ ಆರ್.ಎಸ್. ಕಲ್ಲೂರ, ಶಾಲಾ ಶಿಕ್ಷಕರಾದ ಶ್ರೀಮತಿ ಸತ್ಯವತಿ, ದೈಹಿಕ ಶಿಕ್ಷಕರಾದ ಪ್ರಕಾಶ್, ಪಿ ಎಚ್ ಸಿ ಒ ಶ್ರೀಮತಿ ಯಶೋದ, ಸಿಎಚ್ ಒ ಪೂಜಾ, ರಮ್ಯ, ಡಯಾನ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪಧಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗ್ರಾ.ಪಂ ಕಾರ್ಯದರ್ಶಿ ಪ್ರಸಾದ್ ಭಂಡಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

