• Home  
  • ಮಜೂರು ಗ್ರಾಮ ಪಂಚಾಯತ್ ನಲ್ಲಿ ಕಾಪು ಶಾಸಕರಿಂದ ಅಹವಾಲು ಸ್ವೀಕಾರ, ಸವಲತ್ತು ವಿತರಣೆ
- ರಾಜಕೀಯ

ಮಜೂರು ಗ್ರಾಮ ಪಂಚಾಯತ್ ನಲ್ಲಿ ಕಾಪು ಶಾಸಕರಿಂದ ಅಹವಾಲು ಸ್ವೀಕಾರ, ಸವಲತ್ತು ವಿತರಣೆ

Share: ಮಜೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭ ಶೇಕಡ ೫ ರ ನಿಧಿಯಿಂದ ವಿಕಲಚೇತನರ ಕಲ್ಯಾಣ ನಿಧಿಯ ಸವಲತ್ತು ವಿತರಣೆ,  ಇಂದಿರಾ ಗಾಂಧಿ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿದರು. ಮಜೂರು ಗ್ರಾಮ ಪಂಚಾಯತ್‌ ವತಿಯಿಂದ  ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರನ್ನುರಿಗೆ ಅಭಿನಂಧಿಸಲಾಯಿತು.  ಈ ಸಂದರ್ಭ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ,  […]

ಮಜೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು.

ಇದೇ ಸಂದರ್ಭ ಶೇಕಡ ೫ ರ ನಿಧಿಯಿಂದ ವಿಕಲಚೇತನರ ಕಲ್ಯಾಣ ನಿಧಿಯ ಸವಲತ್ತು ವಿತರಣೆ,  ಇಂದಿರಾ ಗಾಂಧಿ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿದರು.

ಮಜೂರು ಗ್ರಾಮ ಪಂಚಾಯತ್‌ ವತಿಯಿಂದ  ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರನ್ನುರಿಗೆ ಅಭಿನಂಧಿಸಲಾಯಿತು.

 ಈ ಸಂದರ್ಭ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ,   ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ ಕಾಪು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಶರ್ಮಿಳಾ ಜೆ ಆಚಾರ್ಯ, ಉಪಾಧ್ಯಕ್ಷ  ಮಧುಸೂದನ್ ಸಾಲಿಯಾನ್,   ಶಿಲ್ಪಾ ಸುವರ್ಣ,  ಶಶಿಪ್ರಭಾ ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ ಹಾಗೂ ಮಜೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.