ಮಜೂರು ಗ್ರಾಮ ಪಂಚಾಯತ್ ನಲ್ಲಿ ಸಸಿ ವಿತರಣಾ ಕಾರ್ಯಕ್ರಮ
(Majuru) ಮಜೂರು: ಮಜೂರು ಗ್ರಾಮ ಪಂಚಾಯತಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಒಟ್ಟು 300 ಅಡಿಕೆ ಸಸಿ, 200 ಉಡುಪಿ ಮಲ್ಲಿಗೆ, 150 ಸಾಗುವಣಿ ಸಸಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಸದಸ್ಯರಾದ ಸಂದೀಪ್ ರಾವ್, ಜಿತೇಶ್ ಶೆಟ್ಟಿ, ಭಾಸ್ಕರ, ಜ್ಯೋತಿ, ವಿಜಯ್ ಧೀರಜ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಕಾರ್ಯದರ್ಶಿ ಪ್ರಸಾದ್ ಭಂಡಾರಿ ಸ್ವಾಗತಿಸಿ, ವಂದಿಸಿದರು.
—

