ಮಜೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆ
(Majooru) ಮಜೂರು : ಮಜೂರು ಗ್ರಾಮ ಪಂಚಾಯತಿಯಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಸಭಾದ್ಯಕ್ಷತೆಯನ್ನು ವಲಯ ಅರಣ್ಯ ಅಧಿಕಾರಿ ಶ್ರೀಮತಿ ಅನುಷಾ ಭಟ್ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ಆಚಾರ್ಯ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ವಿಲಾಸಿನಿ, ನರೇಗಾ ಯೋಜನೆ ತಾಲೂಕು ಸಂಯೋಜಕರಾದ ರೋಹಿತ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಸರೆ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಹಾಗೂ ಎಲ್.ಸಿ.ಆರ್.ಪಿ ಹಾಗೂ ನರೇಗಾ ಯೋಜನೆ ಫಲಾನುಭವಿಗಳು ಉಪಸ್ಥಿತರಿದ್ದರು.
ತಾಲೂಕು ಸಂಯೋಜಕರಾದ ರೋಹಿತ್ ಕುಮಾರ್‌ರವರು ಇವರು ಪ್ರಾಸ್ತವಿಕ ಮಾತನಾಡಿ, ನರೇಗಾ ಯೋಜನೆ ಬಗ್ಗೆ ಮಾಹಿತಿ ನೀಡಿ, ಪರಿಶೋಧನೆ ಯ ಲೆಕ್ಕ ಪತ್ರ ವಿವರವನ್ನು ಸಭೆಯಲ್ಲಿ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಪ್ರಸಾದ್ ಭಂಡಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

