
ಮಣಿಪುರ ಕುಂತಳನಗರ ಬಂಟರ ಸಂಘದಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ
(Katapadi) ಕಟಪಾಡಿ: ಮಣಿಪುರ ಕುಂತಳನಗರದಲ್ಲಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಸ್ಟ್ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಎಂಆರ್ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ೨ ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್ಜಿ ಗ್ರೂಪ್ನ ಸಂಸ್ಥಾಪಕ ಕೆ. ಪ್ರಕಾಶ್ ಶೆಟ್ಟಿ (MRG Group President Prakash Shetty)ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ಸವಾಲುಗಳನ್ನು ಎದುರಿಸಿ ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿ ಸಾಧನೆಗೈದಲ್ಲಿ ಸುಭದ್ರ ಭವಿಷ್ಯ ನಿಮ್ಮದಾಗಲಿದೆ ಎಂದು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ಉದ್ಯೋಗ ಮೇಳಕ್ಕೆ ಪ್ರಕಾಶ್ ಶೆಟ್ಟಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗಬಹಿದ್ದ ಮಾಜಿ ಸಚಿವ, ಬಿಜೆಪಿ ಮಾಜಿ ಜನರಲ್ ಸೆಕ್ರೆಟರಿ ಸಿ.ಟಿ. ರವಿ (EX Minister CT Ravi) ಮಾತನಾಡಿ, ಸ್ವಾವಲಂಬಿ ಸಮಾಜ ನಿರ್ಮಾಣವಾಗಲು ೪೦ ಕೋಟಿ ಯುವಕರನ್ನು ಕೌಶಲ್ಯ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಭಾರತ ಸರಕಾರ ಸ್ಕಿಲ್ ಇಂಡಿಯಾ ಆರಂಭಿಸಿತು. ಅದಕ್ಕೆ ಒತ್ತಾಸೆಯಾಗಿ ಗ್ರಾಮೀಣ ಭಾಗದ ಬಂಟರ ಸಂಘವು ನಿಂತಿದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಡಾ|ಕೆ.ವಿದ್ಯಾ ಕುಮಾರಿ (Udupi DC DR. Vidhya kumari), ಉಡುಪಿ ಶಾಸಕರಾದ ಯಶ್ಪಾಲ್ ಎ. ಸುವರ್ಣ (Yashpal Suvarna), ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ(GURME Suresh Shetty), ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂಎಲ್ಸಿ ಮಂಜುನಾಥ ಭಂಡಾರಿ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಚೈಯರ್ಮೆನ್ ಆರ್. ಉಪೇಂದ್ರ ಶೆಟ್ಟಿ ಶುಭವನ್ನು ಹಾರೈಸಿದರು.
ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಕಾಂಚನ್ ಆಟೋಮೊಬೈಲ್ಸ್ ಆಡಳಿತ ನಿರ್ದೇಶಕ ಪ್ರಸಾದ್ರಾಜ್ ಕಾಂಚನ್, ಸಾಯಿ ರಾಧ ಗ್ರೂಪ್ನ ಎಂಡಿ ಮನೋಹರ್ ಶೆಟ್ಟಿ, ಸಾಗರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕೋಆರ್ಡಿನೇಟರ್ ನವೀನ್ಚಂದ್ರ ಜೆ. ಶೆಟ್ಟಿ ಪಡುಬಿದ್ರಿ, ಉದ್ಯೋಗ ಮೇಳ ಕಾರ್ಯಕ್ರಮದ ನಿರ್ದೇಶಕ ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಪ್ಲೇಸ್ಮೆಂಟ್ ಮತ್ತು ಅಡ್ಮಿಶನ್ನ ಮುಖ್ಯಸ್ಥರು ಮತ್ತು ಜಾಬ್ಫೇರ್ನ ಚೇರ್ಮನ್ ಗುರುಪ್ರಶಾಂತ್ ಭಟ್, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷರಾದ ಡಾ|ಎಚ್.ಬಿ. ಶೆಟ್ಟಿ, ಟ್ರಸ್ಟಿ, ಪ್ರೋಗ್ರಾಂ ಕೋಆರ್ಡಿನೇಟರ್ ಪದ್ಮನಾಭ ಹೆಗ್ಡೆ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಟ್ರಸ್ಟಿಗಳಾದ ಹೇಮಂತ್ ಶೆಟ್ಟಿ, ರಂಜಿನಿ ಹೆಗ್ಡೆ ವೇದಿಕೆಯಲ್ಲಿದ್ದರು.
ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕೋಶಾಧಿಕಾರಿ ಪ್ರೋಗ್ರಾಂ ಕೋಆರ್ಡಿನೇಟರ್ ವಿಜಿತ್ ಶೆಟ್ಟಿ ವಂದಿಸಿದರು. ವಿಸಿಟಿಂಗ್ ಪ್ರೊ|ದಿವ್ಯಾರಾಣಿ ಪ್ರದೀಪ್ ನಿರೂಪಿಸಿದರು.

