ಮಣಿಪುರ ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ
4-5 ಸಾವಿರ ಕನ್ನಡ ಶಾಲೆಗಳು ಮುಚ್ಚುವ ಹಂತದಲ್ಲಿದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ
(Manirpura, Katapadi) ಮಣಿಪುರ, ಜ.5: ರಾಜ್ಯದಲ್ಲಿನ 48 ಸಾವಿರ ಸರಕಾರಿ ಶಾಲೆಗಳಲ್ಲಿ 4-5 ಸಾವಿರ ಶಾಲೆಗಳು ಮುಚ್ಚುವ ಹಂತದಲ್ಲಿದೆ. ಆಂಗ್ಲ ಭಾಷೆಯ ವ್ಯಾಮೋಹದ ನಡುವೆಯೂ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಯಶಸ್ಸನ್ನು ಕಾಣಲಿ ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಣಿಪುರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭ ಎರಡು ದಿನಗಳ ಅದ್ದೂರಿ ಸಮಾರೋಪ ಸಮಾರಂಭಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಾಜಿ ಸಚಿವ ವಿನಯ ಕುಮಾರ್‌ಸೊರಕೆ ಮಾತನಾಡಿ, ೧೦೦ವರ್ಷಗಳ ಹಿಂದೆ ಅಜ್ಞಾನದ ಕತ್ತಲಿನಲ್ಲಿದ್ದ ಸಮಾಜಕ್ಕೆ ಜ್ಞಾನದ ಬೆಳಕನ್ನು ಬೀರಿದ ಶಾಲಾ ಸಂಸ್ಥಾಪಕರಾದ ದಿ. ಕೆ.ಸೋಮಯ್ಯ ಶೆಟ್ಟಿ, ದಿ. ರಾಧ ಸೋಮಯ್ಯ ಶೆಟ್ಟಿ, ದಿ. ಪಿ. ಜಗನ್ನಾಥ ಶೆಟ್ಟಿ ಅವರು ಶಾಲೆಯೊಂದಿಗೆ ಊರಿನ ಅಭಿವೃದ್ಧಿಯಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ ಧೀಮಂತ ವ್ಯಕ್ತಿತ್ವಕ್ಕೆ ಮಾದರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.
ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಉದ್ಯಮಿಗಳಾದ ರಾಜೇಂದ್ರ ವಿ. ಶೆಟ್ಟಿ ಹುಬ್ಬಳ್ಳಿ, ಮಧುಕರ್ ಶೆಟ್ಟಿ ಮುಂಬಯಿ, ಅಶೋಕ್ ಶೆಟ್ಟಿ ಮುಂಬಯಿ, ಸುಭಾಸ್ ಸಾಲಿಯಾನ್, ಪುರೋಹಿತ್ ಹರೀಶ್ ಆಚಾರ್ಯ ಮುಂಬಯಿ, ವೇದಮೂರ್ತಿ ವಿಖ್ಯಾತ್ ಭಟ್ ಮೂಡುಬೆಳ್ಳೆ, ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ಪುಷ್ಪ ಆಳ್ವ, ಕ್ರೀಡಾ ಸಾಧಕಿ ನೈಮಿಶಾ ಪೂಜಾರಿ ಹಾಗೂ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಬೆಂಗಳೂರು ಉದ್ಯಮಿ ಸಂದೀಪ್ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಮಣಿಪುರ, ಉಡುಪಿ ಗ್ರಾಮೀಣ ಬಂಟರ ಸಂಘದ ಕಾರ್ಯದರ್ಶಿ ವಿಜಿತ್ ಶೆಟ್ಟಿ, ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ, ಪ್ರೇಮಾನಂದ ಶೆಟ್ಟಿ ಬೆಂಗಳೂರು, ಸಮಾಜ ಸೇವಕಿ ಬಿಂದು ಶೆಟ್ಟಿ ಬಡಗುಮನೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಘು ಪೂಜಾರಿ ಕಲ್ಮಂಜೆ, ಮಣಿಪುರ ಗ್ರಾ.ಪಂ. ಉಪಾಧ್ಯಕ್ಷ ಜೋನ್ ಸಿಕ್ವೇರಾ, ಗ್ರಾ.ಪಂ. ಸದಸ್ಯ ಸಂತೋಷ್ ಶೆಟ್ಟಿ, ಮಾಜಿ ಅಧ್ಯಕ್ಷ ಹಸನ್ ಶೇಕಮ್ಮದ್, ಕಲ್ಮಂಜೆ ಮಹಾಲಿಂಗೇಶ್ವರ ದೇವಳದ ಮೊಕ್ತೇಸರ ದಯಾನಂದ ಶೆಟ್ಟಿ, ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ ರತನ್ ಶೆಟ್ಟಿ, ಮೈಸ್ ಕಂಪ್ಯೂಟರ್‌ನ ವಿಷ್ಣುಮೂರ್ತಿ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವೈ. ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಭುವರಾಯ ಆಚಾರ್ಯ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರದೀಪ್ ಪೂಜಾರಿ, ಉಪಾಧ್ಯಕ್ಷ ಅಶೋಕ್ ಪೂಜಾರಿ, ಖಜಾಂಚಿ ಪ್ರವೀಣ್ ಪೂಜಾರಿ ಇದ್ದರು.
ಶಾಲೆಯ ಆರ್ಥಿಕ ಸಮಿತಿಯ ಸಂಚಾಲಕ ಗುರುರಾಜ್ ಭಟ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಶಾ ಶೇಖರ್ ಸಮ್ಮಾನಿತರನ್ನು ಪರಿಚಯಿಸಿದರು.
ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ವಂದಿಸಿದರು. ಸಹ ಶಿಕ್ಷಕ ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.
ಬಳಿಕ ಹಳೆ ವಿದ್ಯಾರ್ಥಿಗಳಿಂದ ʼಮದಿಮೆದ ಇಲ್ಲಡ್ʼ ತುಳು ಸಾಮಾಜಿಕ ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

