• Home  
  • ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe: Provocative speech – Sumoto case filed by police against former minister Pramod Madhwaraj
- ಅಪರಾಧ

ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe: Provocative speech – Sumoto case filed by police against former minister Pramod Madhwaraj

Share: ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe) ಮಲ್ಪೆ: ಮಲ್ಪೆ ಬಂದರಿನಲ್ಲಿ ಶನಿವಾರ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ  ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ  ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ  ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , “ನಮ್ಮ ಮನೆಗೆ ಕಳ್ಳರು […]

(Malpe) ಮಲ್ಪೆ: ಮಲ್ಪೆ ಬಂದರಿನಲ್ಲಿ ಶನಿವಾರ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ  ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ  ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ  ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , “ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಕಟ್ಟಿ ಹಾಕಲೇಬೇಕು. ಕಳ್ಳರನ್ನು ಕಟ್ಟಿ ಹಾಕಲೇ ಬೇಕು.  ಮತ್ತೇನು ಮಾಡಲಿಕ್ಕೆ ಆಗುತ್ತೆ? ಏನು ಅವರಿಗೆ ಏಟು ಎಂದರೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದದ್ದಾ? 2 ಕೆನ್ನೆಗೆ ಬಾರಿಸಿದ್ದು, ಯಾರಿಗೆ? ಕಳ್ಳಿ ಅಂತ ಆರೋಪಿತ ಒಂದು ವ್ಯಕ್ತಿಗೆ, ಆ ಮಹಿಳೆಯದ್ದು ಏನಾದರೂ ಆಕ್ಷೇಪ ಉಂಟಾ?” ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡಿದ್ದರು.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2025 ಕಲಂ ಕಲಂ 57, 191(1), 192. BNS ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.