ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನ
ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾದ ವಿಮಾನ
(Baramathi) ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾಗಿ ಬುಧವಾರ ಬೆಳಿಗ್ಗೆ ಮೃತಪಟ್ಟ ಘಟನೆ ಘಟಿಸಿದೆ.
66 ವರ್ಷದ ಅಜಿತ್ ಪವಾರ್, ಹಿರಿಯ ರಾಜಕಾರಣಿ ಮತ್ತು NCP ಸಂಸ್ಥಾಪಕ ಶರದ್ ಪವಾರ್ ಅವರ ಸೋದರಳಿಯ ಮತ್ತು ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರ ಸೋದರಸಂಬಂಧಿ. ಅವರು ಪ್ರಸ್ತುತ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಪ್ರಾಥಮಿಕ ವರದಿಯ ಪ್ರಕಾರ, ವಿಮಾನವು ಅಪಘಾತದ ಸಮಯದಲ್ಲಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ನಾಯಕ, ಅವರ ಭದ್ರತಾ ಸಿಬ್ಬಂದಿ ಮತ್ತು ಪೈಲಟ್‌ಗಳೊಂದಿಗೆ ಆರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು.
ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಅಜಿತ್ ಪವಾರ್ ಅವರಲ್ಲದೆ, ಅವರ ಭದ್ರತಾ ಸಿಬ್ಬಂದಿ ಸದಸ್ಯ ವಿಧಿತ್ ಜಾಧವ್, ಪೈಲಟ್‌ಗಳಾದ ಸುಮಿತ್ ಕಪೂರ್ ಮತ್ತು ಶಾಂಭವಿ ಪಾಠಕ್ ಮತ್ತು ಇನ್ನೊಬ್ಬ ಪ್ರಯಾಣಿಕ ಪಿಂಕಿ ಜಾಧವ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದ ವಿವರಗಳ ಪ್ರಕಾರ, ವಿಮಾನವು ಬೆಳಿಗ್ಗೆ 8:10 ಕ್ಕೆ ಮುಂಬೈನಿಂದ ಹೊರಟು 8:50 ಕ್ಕೆ ಬಾರಾಮತಿಯಲ್ಲಿ ಇಳಿಯಬೇಕಿತ್ತು. ಇಳಿಯುತ್ತಿದ್ದ ಸಂದರ್ಭ ವಿಮಾನ ನೆಲಕ್ಕೆ ಅಪ್ಫಳಿಸಿ ಬೆಂಕಿಗಾಹುತಿ ಆಗಿದೆ.
ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

