ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಇಂದು (ಡಿ.26) ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು.
ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ನಾಳೆ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ
ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

