ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ
ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆ ನೀಡಿದೆ.
ಇಂದು ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿರುವ ಆಸ್ಪತ್ರೆ, ನಿಶಕ್ತಿಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ.
ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಆರೋಗ್ಯ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

