ಮುಂಡಾಲ ಯುವ ವೇದಿಕೆ ಪಡುಬಿದ್ರಿ – ವನಮಹೋತ್ಸವ ಕಾರ್ಯಕ್ರಮ (Padubidri : Mundala Yuva Vedike vanamahothsava)
ಮುಂಡಾಲ ಯುವ ವೇದಿಕೆ ಪಡುಬಿದ್ರಿ – ವನಮಹೋತ್ಸವ ಕಾರ್ಯಕ್ರಮ.
Photo credit : Ravi Digitals, Padubidri
ಜು.28 ಪಡುಬಿದ್ರಿ : ಪರಿಸರ ಸಮಾತೋಲನೆಗಾಗಿ ಮನುಷ್ಯ ಸಾಮಾಜಿಕ ಕಳಕಳಿಯಿಂದ ಪರಿಸರ ಸಂರಕ್ಷಣೆ ಮತ್ತು ಸಸ್ಯ ಸಂಕುಲಗಳ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹೇಳಿದರು.
ಅವರು ಪಡುಬಿದ್ರಿ ಮುಂಡಾಲ ಯುವ ವೇದಿಕೆಯ ವತಿಯಿಂದ ಸಂತೆಕಟ್ಟೆ ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಲ ವೇದಿಕೆಯ ಅಧ್ಯಕ್ಷ ಶ್ರೀ ಶಿವಪ್ಪ ಸಾಲ್ಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ ಪಡುಬಿದ್ರಿ, ಏಳು ಮಾಗಣೆ ಅಧ್ಯಕ್ಷರಾದ ಸದಾನಂದ ಬೊಗ್ಗರ್ ಲಚ್ಚಿಲ್ ಶುಭಹಾರೈಸಿದರು.
ಈ ಸಂದರ್ಭದಲ್ಲಿ ವಿವಿಧ ಗಿಡಗಳನ್ನು ವಿತರಿಸಲಾಯಿತು.
ಸುರೇಶ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಸನ್ನ ಪಡುಬಿದ್ರಿ ವಂದಿಸಿದರು.