ಮುಂಡ್ಕೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಾರ್ಗವಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ
(Mundkuru) ಮುಂಡ್ಕೂರು: ಆಳ್ವಾಸ್ ಕಾಲೇಜು ಮೂಡಬಿದ್ರೆ, ಸಮಾಜಕಾರ್ಯ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡ್ಕೂರು, ಗ್ರಾಮ ಪಂಚಾಯತ್ ಮುಂಡ್ಕೂರು ಇವರ ಸಹಯೋಗದಲ್ಲಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಾರ್ಗವಿ ಸಮುದಾಯ ಭವನದಲ್ಲಿ ನಡೆಯಿತು.
ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಪಲಿಗ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿ, ಮನುಷ್ಯನಿಗೆ ಆರೋಗ್ಯ ದೊಡ್ಡ ಸಂಪತ್ತಾಗಿದ್ದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.
ವೇದಿಕೆಯಲ್ಲಿ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿ ಬೆಟ್ಟು ಗುತ್ತು, ಸಚ್ಚರೀಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಯಶವಂತ ಆಚಾರ್ಯ, ಪತ್ರಕರ್ತ ಉದಯ ಮುಂಡ್ಕೂರು, ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ. ಎಚ್.ಒ ಮರ್ಲಿನ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಪೌಲಿನ್ ಮೇರಿ, ಆಶಾ ಕಾರ್ಯಕರ್ತರು ಸಂಜೀವಿನಿ ಒಕ್ಕೂಟದ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

