ಮುಂದುವರಿದ ಮಳೆ: ನಾಳೆ ಗುರುವಾರ(ಜು.27) ರಂದು ಉಡುಪಿ ದ. ಕ ಜಿಲ್ಲೆಯ ಶಾಲೆ ಗಳಿಗೆ ಕಾಲೇಜುಗಳಿಗೆ ರಜೆ ಘೋಷಣೆ
ಮುಂದುವರಿದ ಮಳೆ: ನಾಳೆ ಗುರುವಾರ(ಜು.27) ರಂದು ಉಡುಪಿ ದ. ಕ ಜಿಲ್ಲೆಯ ಶಾಲೆ ಗಳಿಗೆ ರಜೆ ಘೋಷಣೆ
ಉಡುಪಿ, ದ.ಕ. : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 27ರಂದು (ಗುರುವಾರ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ಉಡುಪಿ ಮತ್ತು ದ.ಕ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಣೆ ಮಾಡಿಲ್ಲ.

