ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ
ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಂಗ ಸಂಸ್ಥೆ
(Manipala) ಮಣಿಪಾಲ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಂಗ ಸಂಸ್ಥೆಯಾದ ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ ಅಧ್ಯಕ್ಷತೆ ವಹಿಸಿದ್ದರು.
ಅವರು, ಮಕ್ಕಳು ಚಟುವಟಿಕೆಯಿಂದ ಇದ್ದು ಒಳ್ಳೆಯ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಎಜಿಇ ಇದರ ಆಡಳಿತಾಧಿಕಾರಿ ಡಾ. ಶ್ರೀಧರ ರಂಗನಾಥ ಪೈ ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಂಗ ಪೈ ಇವರು ಸಂದರ್ಭೋಚಿತವಾಗಿ ಮಾತನಾಡಿದರು.
ಶಾಲಾ ಹಳೆ ವಿದ್ಯಾರ್ಥಿಗಳಾದ ಡಾ. ಅನುಪ್ ಅಸಿಸ್ಟೆಂಟ್ ಪ್ರೊಫೆಸರ್ ಎಂಐಟಿ ಹಾಗೂ ವಿದುಷಿ ಮಿಥಿಲ ಉಪಾಧ್ಯ ಬಹುಮಾನ ವಿತರಿಸಿದರು.
ಶ್ರೀಮತಿ ನಂದ ಹಾಗೂ ಶ್ರೀಮತಿ ವಿದ್ಯಾ ಅತಿಥಿಗಳನ್ನು ಪರಿಚಯಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿನುತಾ ಎಸ್ ನಾಯಕ್ ಸ್ವಾಗತಿಸಿದರು. ಶಾಲಾ ಶಿಕ್ಷಕಿಯರಾದ ಗಾಯತ್ರಿ ಹಾಗೂ ವನಿತಾ ಕಾರ್ಯಕ್ರಮ ನಿರ್ವಹಿಸಿದರು. ವೀಣಾ ಕಾಮತ್ ವಂದಿಸಿದರು. ಶಾಲಾ ಸಿಬ್ಬಂದಿ ವರ್ಗ ಹಾಗೂ ಶಾಲಾ ನಿವೃತ್ತ ಅಧ್ಯಾಪಕರು ಉಪಸ್ಥಿತರಿದ್ದರು.

