ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳ ಲೋಕಾರ್ಪಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ (Nandini Brand Ambassador Actor Shivraj Kumar) ಅವರು ಜಾಹೀರಾತನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭ ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ (Smt Geetha Shivraj Kumar), ಸಚಿವ ಮಧು ಬಂಗಾರಪ್ಪ (Minister Madhu Bangarappa), ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ (KMF President Bheema Naik) ಮೊದಲಾದವರು ಉಪಸ್ಥಿತರಿದ್ದರು.

