• Home  
  • ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Chief Minister Siddaramaiah garlands the statue of revolutionary hero Sangolli Rayanna)
- Uncategorised

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Chief Minister Siddaramaiah garlands the statue of revolutionary hero Sangolli Rayanna)

Share: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Bengaluru) ಬೆಂಗಳೂರು, ಜನವರಿ 26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ  ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಕಿತ್ತೂರು ರಾಣಿಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. […]

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ

(Bengaluru) ಬೆಂಗಳೂರು, ಜನವರಿ 26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

  ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ  ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

 ಕಿತ್ತೂರು ರಾಣಿಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ  ಸೆಣೆಸಲು ಗೆರಿಲ್ಲಾ ಯುದ್ಧ ತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದರು.

ವಿಜಯನಗರ ಮತ್ತು ಗೋವಿಂದರಾಜ ನಗರ ಶಾಸಕರುಗಳಾದ ಕೃಷ್ಣಪ್ಪ, ಪ್ರಿಯ ಕೃಷ್ಣ ಅವರ ಜೊತೆ ಮಾಜಿ  ಸಚಿವ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.