ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು (Govind Raju) ಹಾಗೂ ನಸೀರ್ ಅಹ್ಮದ್ (Nasir Ahammad), ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ (Vanditha Sharma), ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ (Dr Rajanish Goyal) ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
