ಮುದರಂಗಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ, ಲಾಭಾಂಶ ವಿತರಣೆ
ಮುದರಂಗಡಿ: ಮುದರಂಗಡಿ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮ ವಿದ್ಯಾನಗರದ ದುರ್ಗಾಮಂದಿರ ಸಭಾ ಭವನದಲ್ಲಿ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷೆ ಶ್ರೀಮತಿ ಸುಮತಿ ಮಂಚಕಲ್ ವಹಿಸಿದ್ದರು.
ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾರವರು ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಪ್ರಭುರವರು ಹೆಚ್ಚು ನಡೆದಾಡುವ ಅಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬ ಸಲಹೆ ನೀಡಿದರು.
ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ, ಮುದರಂಗಡಿ ಸಹಕಾರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮುದರಂಗಡಿ, ದುರ್ಗಾ ಮಂದಿರದ ಅಧ್ಯಕ್ಷ ಸುಂದರ್ ಮೂಲ್ಯ, ಅರ್ಚಕ ಶ್ರೀಧರ ಆಚಾರ್ಯ ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ದೇವೇಂದ್ರ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಎಲ್ಲೂರು ಸೇವಾ ಪ್ರತಿನಿಧಿ ಉಷಾ ವಂದಿಸಿದರು.
ಸೇವಾ ಪ್ರತಿನಿಧಿ ಶಕುಂತಲಾ, ಜೋಷ್ನ, ತಂಡದ ಸದಸ್ಯರು ಹಾಜರಿದ್ದರು.

