ಮುಲ್ಕಿ: ಕೊಳಚಿ ಕಂಬಳ ನಿವಾಸಿ ಹರೀಶ್ ಸುವರ್ಣ ನಿಧನ
(Mulki) ಮುಲ್ಕಿ: ಇಲ್ಲಿಗೆ ಸಮೀಪದ ಕೊಳಚಿ ಕಂಬಳ ನಿವಾಸಿ ಹರೀಶ್ ಸುವರ್ಣ (55) ಹೃದಯಾಘಾತದಿಂದ ಬುಧವಾರ ನಿಧನರಾದರು
ಅವರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮುಲ್ಕಿಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯರಾಗಿ, ಕೊಳಚಿ ಕಂಬಳ ಶ್ರೀ ಜಾರಂದಾಯ ದೈವಸ್ಥಾನದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಯಾಗಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷಕ್ಕೆ ಬಹಳಷ್ಟು ಕೊಡುಗೆ ನೀಡಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಮೂಲ್ಕಿ – ಮೂಡಬಿದ್ರಿ ಶಾಸಕ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್, ಭಾರತ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪುಂಜ ಕಾರ್ನಾಡ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಹರ್ಷರಾಜ ಶೆಟ್ಟಿ, ಪುತ್ತುಬಾವ, ಭೀಮಾ ಶಂಕರ್ ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಪ್ರಕಾಶ್ ಸುವರ್ಣ, ರಮೇಶ ಅಮೀನ್ ಕೊಕ್ಕರಕಲ್, ಗೋಪಿನಾಥ ಪಡಂಗ, ಡಿಸಿಸಿ ಕಾರ್ಯದರ್ಶಿ ಧನಂಜಯ ಮಟ್ಟು, ವಕೀಲ ಹಾಗೂ ನೋಟರಿ ಬಿಪಿನ್ ಪ್ರಸಾದ್, ಹಳೆಯ ಅಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಅತಿಕಾರಿಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಕಿಶೋರ್ ಶೆಟ್ಟಿ ಬಪ್ಪ ನಾಡು, ಉದಯ ಕುಮಾರ್ ಶೆಟ್ಟಿ ಅಧಿಧನ್,
ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಸಂಪತ್ ಕೋಟ್ಯಾನ್, ಶಿವರಾಂ ಜಿ ಅಮೀನ್, ಸುರೇಶ್ ಶೆಟ್ಟಿ ಶಿಮಂತೂರು, ಸಾಮಾಜಿಕ ಕಾರ್ಯಕರ್ತರಾದ ಶಂಕರ್ ಪಡಂಗ, ಧರ್ಮಾನಂದ ಶೆಟ್ಟಿಗಾರ, ಕೊಳಚಿಕಂಬಳ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

