# Tags
#ಅಪಘಾತ

 ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್‌ಗೆ  ಬೆಂಕಿ, ಆತಂಕ (Mulki : A burning container On a National Highway)

ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನ್‌ರ್‌ಗೆ ಬೆಂಕಿ, ಆತಂಕ

(Mulki)ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು, ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

 ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೇನರ್,  ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ.

ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೇನರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾನೆ.

 ಕೂಡಲೇ ಮುಲ್ಕಿ ನಗರ ಪಂಚಾಯತ್‌ ಸದಸ್ಯ ಬಾಲಚಂದ್ರ ಕಾಮತ್, ಮುಲ್ಕಿ ಪೊಲೀಸ್ ಠಾಣೆಯ ಎಸ್ಐ ಅನಿತ ನೇತೃತ್ವದಲ್ಲಿ ಮುಲ್ಕಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆಜ್ಮಾಡಿ ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪೆಟ್ರೋಲ್ ಬಂಕ್ ಬಳಿಯಿಂದ ಬೆಂಕಿ ನಂದಿಸುವ ಸಾಧನವನ್ನು ತಂದು ಕೂಡಲೇ ಬೆಂಕಿ ನಂದಿಸಿದ್ದಾರೆ.

 ಬಳಿಕ ಹಳೆಯಂಗಡಿಯ ಪೂಜಾ ರೇಂಜರ್ಸ್ ವತಿಯಿಂದ ನೀರನ್ನು ತಂದು ಪೂರ್ತಿ ಬೆಂಕಿ ನಂದಿಸಲಾಯಿತು.

ಅವಘಡದ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ತೆರವುಗೊಳಿಸಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2