# Tags
#ಧಾರ್ಮಿಕ

  ಮುಲ್ಕಿ: ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ವಿಜೃಂಭಣೆಯ ನೇಮೋತ್ಸವ (Mulki : Kordabbu, Thannimaniga Nema)

  ಮುಲ್ಕಿ: ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ವಿಜೃಂಭಣೆಯ ನೇಮೋತ್ಸವ

(Mulki) ಮುಲ್ಕಿ: ಇಲ್ಲಿಗೆ ಸಮೀಪದ ಬೆಳ್ಳಾಯರು ಕೋಲ್ನಾಡು ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ  ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಶನಿವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ದ್ವಜಸ್ತಂಭ ಮುಹೂರ್ತ, ಸಂಜೆ 3 ಗಂಟೆಗೆ ದೊಂಪ ಏರುವುದು, ಭಂಡಾರ ಹೊರಡುವ ಕಾರ್ಯಕ್ರಮ ನಡೆದು ಫ್ರೆಂಡ್ಸ್ ಕ್ಲಬ್ ಕೋಲ್ನಾಡು ವತಿಯಿಂದ ರಾತ್ರಿ ಮಹಾ ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ಹಾಗೂ ಭಾನುವಾರ  ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭ ಶ್ರೀ ಕೋರ್ದಬ್ಬು ಸೇವಾ ಸಮಿತಿಯ ಅಧ್ಯಕ್ಷ ಜೈ ಕೃಷ್ಣ ಶೆಟ್ಟಿ ಕಲ್ಲಿಮಾರು, ಕಿರಣ್ ಶೆಟ್ಟಿ ಕೋಲ್ನಾಡುಗುತ್ತು, ಪ್ರಮೋದ್ ಶೆಟ್ಟಿ, ದಿನೇಶ್ ಸುವರ್ಣ ಬೆಳ್ಳಾಯರು ಸಮಿತಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3