• Home  
  • ಮೂಡಬಿದ್ರಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಪ್ರಥಮ ಸಭೆ (First meeting of the State Kambala Association in Moodbidri)
- ಕ್ರೀಡೆ

ಮೂಡಬಿದ್ರಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಪ್ರಥಮ ಸಭೆ (First meeting of the State Kambala Association in Moodbidri)

Share:  ಮೂಡಬಿದ್ರಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಪ್ರಥಮ ಸಭೆ  ನೂತನ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿಯವರಿಗೆ ಅಭಿನಂದನೆ (Moodabidri) ಮೂಡುಬಿದ್ರಿ : ಕಂಬಳಕ್ಕೆ ಸರ್ಕಾರದ ಮಾನ್ಯತೆ ಹಾಗೂ ಕಂಬಳ ಆಯೋಜನೆಗೆ ಹೈಕೋರ್ಟ್ ಅನುಮತಿ ನೀಡಿರುವುದರಿಂದ ಅತ್ಯಂತ ಚಾಗರೂಕರಾಗಿ ಕಂಬಳಗಳನ್ನು ಶಿಸ್ತುಬದ್ಧವಾಗಿ, ಸಮಯ ಪರಿಪಾಲನೆಯೊಂದಿಗೆ ನಡೆಸುವ ಕುರಿತು ಬುಧವಾರ ಮೂಡಬಿದ್ರಿಯಲ್ಲಿ ನಡೆದ ರಾಜ್ಯ ಕಂಬಳ ಅಸೋಸಿಯೇಶನ್ ಪದಾಧಿಕಾರಿಗಳ ಪ್ರಥಮ ಸಭೆಯಲ್ಲಿ ನಿರ್ಣಯಿಸಲಾಯಿತು.    ಕಂಬಳ ಸಮಿತಿಗಳ ವ್ಯವಸ್ಥಾಪಕರು ಹಾಗೂ ಅಸೋಯೇಶನ್‌ನ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ […]

(Moodabidri) ಮೂಡುಬಿದ್ರಿ : ಕಂಬಳಕ್ಕೆ ಸರ್ಕಾರದ ಮಾನ್ಯತೆ ಹಾಗೂ ಕಂಬಳ ಆಯೋಜನೆಗೆ ಹೈಕೋರ್ಟ್ ಅನುಮತಿ ನೀಡಿರುವುದರಿಂದ ಅತ್ಯಂತ ಚಾಗರೂಕರಾಗಿ ಕಂಬಳಗಳನ್ನು ಶಿಸ್ತುಬದ್ಧವಾಗಿ, ಸಮಯ ಪರಿಪಾಲನೆಯೊಂದಿಗೆ ನಡೆಸುವ ಕುರಿತು ಬುಧವಾರ ಮೂಡಬಿದ್ರಿಯಲ್ಲಿ ನಡೆದ ರಾಜ್ಯ ಕಂಬಳ ಅಸೋಸಿಯೇಶನ್ ಪದಾಧಿಕಾರಿಗಳ ಪ್ರಥಮ ಸಭೆಯಲ್ಲಿ ನಿರ್ಣಯಿಸಲಾಯಿತು.

   ಕಂಬಳ ಸಮಿತಿಗಳ ವ್ಯವಸ್ಥಾಪಕರು ಹಾಗೂ ಅಸೋಯೇಶನ್‌ನ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಸುವ ಬಗ್ಗೆ ನಿರ್ಣಯಿಸಲಾಯಿತು.

     ಅಸೋಷಿಯೇಶನ್‌ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್‌ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಭಾಗದ ರಾಜ್ಯ ಜನಪ್ರತಿನಿಧಿಗಳ ಬೆಂಬಲದಿಂದಾಗಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಅಧಿವೇಶನದಲ್ಲೂ ಮುಖ್ಯ ಮಮಂತ್ರಿಗಳು ಕಂಬಳಕ್ಕೆ ರಾಜ್ಯ ಮಾನ್ಯತೆಯ ಭರವಸೆ ನೀಡಿದ್ದರು. ಅಸೋಸಿಯೆಶನ್ ಅಸ್ತಿತ್ವಕ್ಕೆ ಬಂದಿರುವುದರಿಂದ ಸರ್ಕಾರದ ನಿರ್ದೇಶನದಂತೆ ನಮ್ಮ ಕಾರ್ಯ ವೈಖರಿ ನಡೆಯಬೇಕಾಗಿದೆ.

    ಕಂಬಳಗಳಿಗೆ ಅನುದಾನ, ಕಂಬಳ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಸಹಿತ ವಿವಿಧ ಸವಲತ್ತುಗಳಿಗೆ ಬೇಕಾದ ದಾಖಲೆಗಳನ್ನು ಕ್ರೋಡೀಕರಿಸುವುದು ಕೂಡ ಅಗತ್ಯ. ಕಂಬಳಕ್ಕೆ ಸಂಬಂಧಪಟ್ಟ ಎಲ್ಲರೂ ಅಸೋಶಿಯೇಶನ್ ಜೊತೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

   ಅಸೋಷಿಯೇಶನ್‌ನ ಪ್ರಥಮ ಅಧ್ಯಕ್ಷರಾಗಿ ಆಯ್ಕೆಯಾದ ಬೆಳಪು ಡಾ. ದೇವಿಪ್ರಸಾದ್‌ ಶೆಟ್ಟಿ ಅವರನ್ನು ಪದಾಧಿಕಾರಿಗಳು ಅಭಿನಂದಿಸಿದರು.

   2025-26 ಸಾಲಿನ ಕಂಬಳ ವೇಳಾಪಟ್ಟಿ ಹಾಗೂ ಕಂಬಳದ ನೀತಿ ನಿಯಮಗಳನ್ನು ಒಳಗೊಂಡ ಪುಸ್ತಕ ಬಿಡುಗಡೆಗೊಳಿಲಾಯಿತು.

    ಕಂಬಳ, ತುಳುನಾಡು ಹಾಗೂ ಕ್ರೀಡಾ ಪ್ರಾಧಿಕಾರದ ಧ್ವಜವನ್ನು ಪ್ರತಿ ಕಂಬಳಗಳಲ್ಲಿ ಅಳವಡಿಸುವಂತೆ ಸೂಚಿಸಲಾಯಿತು.

   ಉಪಾಧ್ಯಕ್ಷ ನವೀನ್ ಚಂದ್ರ ಆಳ್ವ, ಕಾರ್ಯದರ್ಶಿ ವಿಜಯ ಕುಮಾ‌ರ್ ಕಂಗಿನಮನೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಮುಳ್ಳೂರು, ಕಾರ್ಯಕಾರಿ ಸಮಿತಿ ಸದಸ್ಯರಾದ ರೋಹಿತ್ ಕುಮಾರ್ ಹೆಗ್ಡೆ, ಶಾಂತರಾಮ್ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್, ಶ್ರೀಕಾಂತ್ ಭಟ್, ಪಿ.‌ ಆ‌ರ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಅನಿಲ್ ಶೆಟ್ಟಿ, ಪ್ರಶಾಂತ್ ಕಾಜವ, ಅರುಣ್ ಶೆಟ್ಟಿ, ಚಂದ್ರಹಾಸ ಸನಿಲ್, ಪಿಯೂಸ್ ಎಸ್. ರೊಡ್ರಿಗಸ್, ಸುಧಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸಹ ಸದಸ್ಯರಾದ ವಿಕ್ರಂ, ವೆಂಕಟ್ ಪೂಜಾರಿ, ಕೇಶವ ಭಂಡಾರಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.