ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಯೋಜನೆ
(Moodubelle) ಮೂಡು ಬೆಳ್ಳೆ: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮತ್ತು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲೀನಾ ನಾಯಕ್ ರವರು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ, ಜೇಸಿ ತರಬೇತಿದಾರ ರಾಕೇಶ್ ಕುಂಜೂರುರವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರ, ಮದ್ಯಪಾನ , ದೂಮಪಾನ, ಡ್ರಗ್ಸ್, ಮೊಬೈಲ್ ಬಳಕೆಯಿಂದ ಆರೋಗ್ಯದಲ್ಲಾಗುವ ದುಷ್ಪರಿಣಾಮ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ರಾಜ್ಯಧ್ಯಕ್ಷರಾದ ದೇವದಾಸ ಹೆಬ್ಬಾರ್ ರವರು ಕಾರ್ಯಕ್ರಮದ ಬಗ್ಗೆ ಪ್ರಸ್ತವಿಕವಾಗಿ ಮಾತನಾಡಿದರು.
ಕಾರ್ಯ ಕ್ರಮದ್ದಲ್ಲಿ ಜನ ಜಾಗೃತಿ ವಲಯಾಧ್ಯಕ್ಷರಾದ ಶ್ರೀಮತಿ ಸುಜಾತ ಸುವರ್ಣ, ಬೆಳ್ಳೆ ಒಕ್ಕೂಟದ ಅಧ್ಯಕ್ಷರಾದ ದೀಪ, ವಲಯ ಮೇಲ್ವಿಚಾರಕಕಿ ಗೀತಾ ಎನ್, ಸೇವಾ ಪ್ರತಿನಿಧಿ ಶ್ರೀಮತಿ ಲಕ್ಷ್ಮಿ ಹಾಗೂ ಕಾಲೇಜು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

