• Home  
  • ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ (Womens day Celebration at Moolki Balikashrama)
- social service

ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ (Womens day Celebration at Moolki Balikashrama)

Share: ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ (Moolki) ಮೂಲ್ಕಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದ ಬಾಲೆಯರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ದಿನವಿಡೀ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಅವರಿಗಾಗಿ ಡಾ. ಐಶ್ವರ್ಯಾ ಸಿ.ಅಂಚನ್ ಆಯುರ್ವೇದ ಜೀವನ ಪದ್ಧತಿ ಮತ್ತು […]

ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ

(Moolki) ಮೂಲ್ಕಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮೂಲ್ಕಿಯ ಸಿ.ಎಸ್.ಐ. ಬಾಲಿಕಾಶ್ರಮದ ಬಾಲೆಯರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.

ದಿನವಿಡೀ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಅವರಿಗಾಗಿ ಡಾ. ಐಶ್ವರ್ಯಾ ಸಿ.ಅಂಚನ್ ಆಯುರ್ವೇದ ಜೀವನ ಪದ್ಧತಿ ಮತ್ತು ಚಿಕಿತ್ಸಾ ಮಾಹಿತಿ ನೀಡಿದರು.

ಸನ್ಮಾನ: ಇದೇ ಸಂದರ್ಭ ಸ್ನಾತಕೋತ್ತರ 6ನೇ ರ‍್ಯಾಂಕ್ ವಿಜೇತೆ ಡಾ. ಐಶ್ವರ್ಯ ಸಿ. ಅಂಚನ್‌ರವರನ್ನು ಸಂಘಟಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ (Y Sudhir Kumar) ಮಾತನಾಡಿ, ಸ್ವಾವಲಂಬಿಗಳಾಗಿ ಸಾಧಕರಾಗಿ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.

ಸಿ.ಎಸ್.ಐ. ಚರ್ಚ್ ಸಭಾಪಾಲಕ ರೆ.ಫಾ. ಸ್ಟೀವನ್ ಸರ್ವೋತ್ತಮ ಮುಖ್ಯ ಅತಿಥಿಯಾಗಿ ಮಾತನಾಡಿ, ಸಾಧಕರ ಶ್ರಮ ಬಾಲೆಯರಿಗೆ ಪ್ರೇರಣೆಯಾಗಲಿ ಎಂದರು.

ಸೇವಾದಳದ ಅಧ್ಯಕ್ಷ ಸಂತೋಷ್ ಪೂಜಾರಿ, ಮಹಿಳಾ ಮಂಡಳಿ ಅಧ್ಯಕ್ಷೆ ರೋಹಿಣಿ ಅನಂದ್, ಕಲ್ಪತರು ಸ್ವಸಹಾಯ ಸಂಘದ ಮೇಲ್ವಿಚಾರಕ ರಮಾನಂದ ಪೂಜಾರಿ, ಬಾಲಿಕಾಶ್ರಮದ ಮೇಲ್ವಿಚಾರಕಿ ಶಾಂತಿ ಮುಖ್ಯ ಅತಿಥಿಗಳಾಗಿದ್ದರು.

ರವಿರಾಜ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ರೋಹಿಣಿ ಅನಂದ್ ಸ್ವಾಗತಿಸಿದರು. ಕಾರ್ಯದರ್ಶಿ ತೇಜಾವತಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.