• Home  
  •  ಮೂಳೂರಿನಲ್ಲಿ ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ : ಸ್ಥಳೀಯರ ವಿರೋಧ (Municipal sewage treatment plant in Mulur : Locals oppose)
- protest

 ಮೂಳೂರಿನಲ್ಲಿ ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ : ಸ್ಥಳೀಯರ ವಿರೋಧ (Municipal sewage treatment plant in Mulur : Locals oppose)

Share: ಮೂಳೂರಿನಲ್ಲಿ ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ : ಸ್ಥಳೀಯರ ವಿರೋಧ   (Kaup) ಕಾಪು : ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಪುರಸಭೆಯು ಸುಮಾರು 1.78 ಎಕರೆ ಜಾಗದಲ್ಲಿ ಕಾಪು ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ ಟಿ ಪಿ) ನಿರ್ಮಿಸುವ ಬಗ್ಗೆ ಸ್ಥಳೀಯರು ಹೋರಾಟಕ್ಕೆ ಸಜ್ಜಾಗಿದ್ದಾರೆ.  ಹೋರಾಟಕ್ಕೆ ಪೂರ್ವಭಾವಿಯಾಗಿ ಎ.24 ರಂದು ಅಧಿಕಾರಿವರ್ಗ ಮತ್ತು ಜನಪ್ರತಿಧಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಮೂಳೂರು ಗ್ರಾಮಸ್ಥ ಪುರುಷೋತ್ತಮ ಸಾಲ್ಯಾನ್ ಮಂಗಳವಾರ ಕಾಪು ಪ್ರೆಸ್ ಕ್ಲಬ್ […]

  (Kaup) ಕಾಪು : ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಪುರಸಭೆಯು ಸುಮಾರು 1.78 ಎಕರೆ ಜಾಗದಲ್ಲಿ ಕಾಪು ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ ಟಿ ಪಿ) ನಿರ್ಮಿಸುವ ಬಗ್ಗೆ ಸ್ಥಳೀಯರು ಹೋರಾಟಕ್ಕೆ ಸಜ್ಜಾಗಿದ್ದಾರೆ.

 ಹೋರಾಟಕ್ಕೆ ಪೂರ್ವಭಾವಿಯಾಗಿ ಎ.24 ರಂದು ಅಧಿಕಾರಿವರ್ಗ ಮತ್ತು ಜನಪ್ರತಿಧಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಮೂಳೂರು ಗ್ರಾಮಸ್ಥ ಪುರುಷೋತ್ತಮ ಸಾಲ್ಯಾನ್ ಮಂಗಳವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೂಳೂರಿನ ಗ್ರಾಮಸ್ಥರು ಒಟ್ಟಾಗಿ ಎ.24 ರಂದು ಗುರುವಾರ ಬೆಳಿಗ್ಗೆ 8.30 ಕ್ಕೆ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಸೇರಿ ಕಾಪು ಪುರಸಭೆಗೆ, ತಾಲೂಕು ಕಚೇರಿಗೆ, ಕಾಪು ಶಾಸಕರಿಗೆ, ಮಾಜಿ ಸಚಿವರಿಗೆ ಪ್ರತಿಭಟನೆಯೊಂದಿಗೆ ತೆರಳಿ ಮನವಿ ಪತ್ರ ನೀಡಲು ಉದ್ದೇಶಿಸಲಾಗಿದೆ.

  ಪುರಸಭಾ ಸದಸ್ಯರಿಗೆ ಮಾಹಿತಿ ನೀಡದೆ ಕೆಲವು ದಿನಗಳ ಹಿಂದೆ ಸುಮಾರು 1.78 ಎಕರೆ ಸರಕಾರಿ ಜಮೀನನ್ನು ತಾಲೂಕು ಆಡಳಿತ ಕಾಪು ಪುರಸಭೆಗೆ ಮಂಜೂರು ಮಾಡಿದೆ. ಮೂಳೂರಿನ ಸೂಜಿ ಮೊನೆಯಷ್ಟು ಜಾಗವನ್ನೂ ನಾವು ಕೊಳಚೆ ನೀರು ಸಂಸ್ಕರಣಾ ಘಟಕ  ಮಾಡಲು ಬಿಟ್ಟು ಕೊಡುವುದಿಲ್ಲ ಎಂದರು.

ಗ್ರಾಮಸ್ಥರಾದ ಪ್ರಭಾತ್ ಶೆಟ್ಟಿ ಬಿಕ್ರಿಗುತ್ತು ಮಾತನಾಡಿ, ಕಾಪು ಪೇಟೆಯನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಅವೈಜ್ಞಾನಿಕ ಯೋಜನೆಯನ್ನು ನಮ್ಮ ಊರಿಗೆ ತಂದು ಹಾಳು ಮಾಡಲೆತ್ನಿಸುವುದು ದುರಂತ. ಸದ್ರಿ ಜಮೀನು ನಂಜ ಜಮೀನು ಆಗಿದ್ದು, ಮೇಲ್ಮಟ್ಟದ ಅಂತರ್ಜಲದ ಜೊತೆಗೆ 60-70 ಮೀ. ಅಂತರದಲ್ಲಿ ಮನೆ, ಕೃಷಿ ಭೂಮಿ, ತೋಟ, ನಾಗಬನ, ದೈವರಾಧನೆ ಸ್ಥಳಗಳು ಹಾಗೂ ಕುಡಿಯುವ ನೀರಿನ ಬಾವಿಗಳಿದ್ದು, ಒಂದು ವೇಳೆ ಈ ಘಟಕ ನಿರ್ಮಾಣವಾದರೆ ಇಡೀ ಗ್ರಾಮದ ಕುಡಿಯುವ ನೀರಿನ ಭಾವಿ ಕಲುಷಿತಗೊಳ್ಳುತ್ತದೆ. ಇದರಿಂದ ಹೊರ ಸೂಸುವ ದುರ್ನಾತ ವಾಸನೆ ಹಾಗೂ ಕೆಮಿಕಲ್ ಮಿಶ್ರಿತ ತ್ಯಾಜ್ಯ ಇಡೀ ಪರಿಸರವನ್ನು ಕಲುಷಿತ ಆಗುವುದರ ಜತೆಗೆ ಮಾರಕ ರೋಗ ಕ್ಯಾನ್ಸರ್, ಮಲೇರಿಯಾ, ಡೆಂಗ್ಯೂನಂತಹ ಮಾರಕಾ ಸಾಂಕ್ರಾಮಿಕ ರೋಗ ಹರಡುವ ಭೀತಿ ಇರುತ್ತದೆ ಎಂದರು.

 ಪತ್ರಿಕಾಗೋಷ್ಠಿಯಲ್ಲಿ ಕಾಪು ಪುರಸಭಾ ಸದಸ್ಯರಾದ ಸತೀಶ್ಚಂದ್ರ ಮತ್ತು ಮೊಹಮ್ಮದ್ ಆಸೀಫ್, ಸ್ಥಳೀಯರಾದ ಚಿತ್ತನ್ ಪೂಜಾರಿ ಉಪಸ್ಥಿತರಿದ್ದರು.

************ 4 ಕೋಟಿ 34 ಲಕ್ಷ ಅನುದಾನದ ಯೋಜನೆ ಇದಾಗಿದೆ. ಎಲ್ಲಾ ಸದಸ್ಯರಿಗೆ ಈ ಬಗ್ಗೆ ಮಾಹಿತಿ ಇದೆ :  ಪುರಸಭಾ ಮುಖ್ಯಾಧಿಕಾರಿ ನಾಗರಾಜಾ ಚಿಕ್ಕಲಪರವಿ

  ಕಾಪು ಪುರಸಭಾ ಮುಖ್ಯಾಧಿಕಾರಿ ನಾಗರಾಜಾ ಚಿಕ್ಕಲಪರವಿಯವರು ಕೊಳಚೆ ನೀರು ಸಂಸ್ಕರಣಾ ಘಟಕದ ಬಗ್ಗೆ ಮಾತನಾಡಿ ಸುಮಾರು ವರ್ಷದಿಂದ  ಕಾಪುವಿನಲ್ಲಿ ಕೊಳಚೆ ನೀರಿನ ಘಟಕ ಇಲ್ಲದಿರುವುದರಿಂದ ಜಲಶುದ್ಧಿ ಅಭಿಯಾನ ಅನುದಾನದ ಅಧೀನದಲ್ಲಿ ಎಸ್ ಬಿ ಎಮ್ ಯೋಜನೆಯಲ್ಲಿ ಎಸ್ ಟಿ ಪಿ ಬಂದಿದೆ. ಇದನ್ನು ಕೆಯುಡಿಎಫ್ಸಿ ಬೋಡ್ ಅನುಷ್ಠಾನಕ್ಕೆ ತರಲಿದೆ. 4 ಕೋಟಿ 34 ಲಕ್ಷ ಅನುದಾನದ್ದಾಗಿದೆ. 1.78 ಎಕರೆ ಸರಕಾರಿ ಜಮೀನನ್ನು ತಾಲೂಕು ಆಡಳಿತ ಕಾಪು ಪುರಸಭೆಗೆ ಮಂಜೂರು ಮಾಡಿದೆ. ಇದರ 100 ಮೀ. ಸುತ್ತ ವಸತಿ ವ್ಯವಸ್ಥೆ ಇಲ್ಲದ ಜಾಗವಾಗಿದೆ‌. ಇದರ ಬಗ್ಗೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.