ಮೂಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿ ದಂಡೆಗೆ ಡಿಕ್ಕಿ, ಇಬ್ಬರಿಗೆ ಗಾಯ
(Muluru) ಮೂಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಕ್ಕದ ಚರಂಡಿ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಗುರುವಾರ ರಾಹೆ ೬೬ರ ಶ್ರೀ ಸರ್ವೇಶ್ವರ ಬಬ್ಬರ್ಯ ದೈವಸ್ಥಾನದ ಎದುರು ಘಟಿಸಿದೆ.
ಕಾರು ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿತ್ತು.
ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಯ ದಂಡೆಗೆ ಡಿಕ್ಕಿ ಹೊಡೆದ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಅವರಿಬ್ಬರೂ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅದೃಷ್ಟವಶಾತ್ ಪಕ್ಕದಲ್ಲಿ ಯಾರೂ ಇಲ್ಲದ ಕಾರಣ ಸಂಭಾವ್ಯ ಅವಘಡವೊಂದು ತಪ್ಪಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

