• Home  
  • ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ನ್ಯಾಯಾಲಯದಿಂದ ಹಸಿರು ನಿಶಾನೆ (Court gives green signal to Mysore, Bangalore, Shimoga Kambala)
- ಕ್ರೀಡೆ

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ನ್ಯಾಯಾಲಯದಿಂದ ಹಸಿರು ನಿಶಾನೆ (Court gives green signal to Mysore, Bangalore, Shimoga Kambala)

Share:  ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ನ್ಯಾಯಾಲಯದಿಂದ ಹಸಿರು ನಿಶಾನೆ ಕಂಬಳ ಸಮಿತಿ, ಅಸೋಶಿಯೇಶನ್ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಂತಸ (Bengaluru) ಬೆಂಗಳೂರು: ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ಆಯೋಜನೆ ಕುರಿತು ವಿಚಾರ ನ್ಯಾಯಾಲಯದಲ್ಲಿದ್ದು, ಇದೀಗ ಈ ಮೂರು ಕಡೆ ಕಂಬಳ ನಡೆಸಲು ಹೈಕೋರ್ಟ್ ಗ್ರಿನ್‌ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ.    ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ. ಈ ಮೂಲಕ ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಶಿಯನಿಗೆ ಮೊದಲ […]

(Bengaluru) ಬೆಂಗಳೂರು: ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ಆಯೋಜನೆ ಕುರಿತು ವಿಚಾರ ನ್ಯಾಯಾಲಯದಲ್ಲಿದ್ದು, ಇದೀಗ ಈ ಮೂರು ಕಡೆ ಕಂಬಳ ನಡೆಸಲು ಹೈಕೋರ್ಟ್ ಗ್ರಿನ್‌ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ.

   ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ. ಈ ಮೂಲಕ ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಶಿಯನಿಗೆ ಮೊದಲ ಜಯ ಸಿಕ್ಕಂತಾಗಿದೆ. ಜಿಲ್ಲಾ ಕಂಬಳ ಸಮಿತಿ ಹಾಗೂ ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ.

    ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಜಿಲ್ಲಾ ಕಂಬಳ ಸಮಿತಿ ಹಾಗೂ ಕಂಬಳ ಅಸೋಶಿಯೇಶನ್ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ವಾದಿಸಿದ್ದರು. ಕರ್ನಾಟಕ ಸರ್ಕಾರ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮದೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.

    ಪ್ರವಾಸೋದ್ಯಮಕ್ಕೆ ಇದು ಉತ್ತೇಜನ ನೀಡುತ್ತದೆ. ಸರ್ಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಶಿಯೇಶನ್‌, ಜಿಲ್ಲಾ ಸಮಿತಿಗೆ ಸಂದ ಜಯ ಎಂದು ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.