ಮೊಬೈಲ್ ಚಿತ್ರೀಕರಣ ಪ್ರಕರಣ: ಉಡುಪಿ ಕಾಲೇಜು ಆಡಳಿತ ಮಂಡಳಿಯ ಸ್ಪಷ್ಟೀಕರಣ
ಮೊಬೈಲ್ ಚಿತ್ರೀಕರಣ ಪ್ರಕರಣ: ಉಡುಪಿ ಕಾಲೇಜು ಆಡಳಿತ ಮಂಡಳಿಯ ಸ್ಪಷ್ಟೀಕರಣ
ಉಡುಪಿ: ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ವಾಷ್ ರೂಮಿನ ದೃಶ್ಯಗಳನ್ನು ಮೂವರು ಅನ್ಯ ಕೋಮಿನ ವಿದ್ಯಾರ್ಥಿನಿಯರು ಚಿತ್ರೀಕರಣ ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ.
ಈ ಸಂಬಂಧ ಇಂದು ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್, ಪ್ರಕರಣದ ಮೂವರು ವಿದ್ಯಾರ್ಥಿನಿಯರು ಒಂದೇ ಕ್ಲಾಸ್ ನವರಾಗಿದ್ದು, ಇನ್ನೊಬ್ಬಳು ಹುಡುಗಿ ಬೇರೆ ಕ್ಲಾಸ್ ನವಳು. ಇಂತಹ ಘಟನೆ ನಡೆಯಬಾರದು ಎಂಬ ಕಾರಣಕ್ಕೆ ಮೊಬೈಲ್ ಬ್ಯಾನ್ ಮಾಡಿದ್ದೇವೆ.
ಮೊಬೈಲ್ ತಂದದ್ದು, ಶೂಟ್ ಮಾಡಿದ್ದು ತಪ್ಪು. ಹಾಗಾಗಿ ಮೂವರನ್ನು ಸಸ್ಪೆಂಡ್ ಮಾಡಿದ್ದೇವೆ. ಇಲ್ಲಿ ಸಂತ್ರಸ್ತೆ ಯಾವುದೇ ದೂರು ಕೊಟ್ಟಿಲ್ಲ. ಕಾಲೇಜ್ ಮೇಟ್ ಆಗಿರುವ ಕಾರಣ ದೂರು ಕೊಡಲ್ಲ ಎಂದಿದ್ದಾಳೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ನೂರಾರು ವಿದ್ಯಾರ್ಥಿನಿಯರ ಚಿತ್ರೀಕರಣ ಮಾಡಲಾಗಿದೆ ಎಂಬುದು ವದಂತಿ ಮಾತ್ರ
ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ.
ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಯಬಿಡಬೇಡಿ, ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡುವುದಿಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆಯ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ಕೊಟ್ಟಿದ್ದಾಳೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.