ಯುವಜನೋತ್ಸವ 2026 : ವೈಕುಂಠ ಬಾಳಿಗ ಕಾಲೇಜಿನ ಆತ್ಮಿಕಾ ಶ್ರಿಯಾನ್, ಮಾರ್ಕಸ್ ಗೆ ಬಹುಮಾನ
ಮಹಾವಿದ್ಯಾಲಯದ ಆಡಳಿತ ಮಂಡಳಿಯಿಂದ ಅಭಿನಂದನೆ
(Udupi) ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನೋತ್ಸವ 2026 ಅನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕುಮಾರಿ ಆತ್ಮಿಕಾ ಶ್ರಿಯಾನ್ ರವರು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾರ್ಕಸ್ ರವರು ಕವನ ರಚನಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಸಂಸ್ಥೆಯ ಪ್ರಾಂಶುಪಾಲೆ ಡಾ. ಸುರೇಖಾ ಕೆ. ಹಾಗೂ ಉಪಪ್ರಾಂಶುಪಾಲೆ ಮತ್ತು ಸಾಂಸ್ಕೃತಿಕ ಸಂಯೋಜಕಿ ಡಾ. ಪ್ರೀತಿ ಹರೀಶ್ ರಾಜ್ ಅವರು ವಿದ್ಯಾರ್ಥಿಗಳ ಸಾಧನೆಗಾಗಿ ಅವರನ್ನು ಅಭಿನಂದಿಸಿದರು.

