• Home  
  • ರಾಜ್ಯದಲ್ಲಿ ಹಾಲಿನ ದರ,  ಬಸ್ ಪ್ರಯಾಣ ದರ ಹೆಚ್ಚಳ : ಆರ್ಥಿಕ ಹೊರೆ ಕಡಿಮೆಗೆ ಆಗ್ರಹ (Hike in milk prices and bus fares in the state: Demand to reduce the financial burden)
- PROBLEMS

ರಾಜ್ಯದಲ್ಲಿ ಹಾಲಿನ ದರ,  ಬಸ್ ಪ್ರಯಾಣ ದರ ಹೆಚ್ಚಳ : ಆರ್ಥಿಕ ಹೊರೆ ಕಡಿಮೆಗೆ ಆಗ್ರಹ (Hike in milk prices and bus fares in the state: Demand to reduce the financial burden)

Share: ರಾಜ್ಯದಲ್ಲಿ ಹಾಲಿನ ದರ,  ಬಸ್ ಪ್ರಯಾಣ ದರ ಹೆಚ್ಚಳ : ಆರ್ಥಿಕ ಹೊರೆ ಕಡಿಮೆಗೆ ಆಗ್ರಹ   ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಹಾವೇರಿ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲಾಧಿಕಾರಿಯವರಿಗೆ ಮನವಿ. (Haveri) ಹಾವೇರಿ: ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ರೈತರು, ಆಟೋ ಚಾಲಕರು, ಸಣ್ಣ ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.  ಇತ್ತೀಚಿನ ದಿನಗಳಲ್ಲಿ […]

(Haveri) ಹಾವೇರಿ: ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ರೈತರು, ಆಟೋ ಚಾಲಕರು, ಸಣ್ಣ ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

 ಇತ್ತೀಚಿನ ದಿನಗಳಲ್ಲಿ ಹಾಲಿನ ದರ ಪ್ರತಿ ಲೀಟರ್ಗೆ ರೂ. 8 ಹೆಚ್ಚಳ ಹಾಗೂ ಬಸ್ ಪ್ರಯಾಣ ದರದಲ್ಲಿ ರೂ. 9 ಹೆಚ್ಚಳವಾಗಿರುವುದು ಸೇರಿದಂತೆ ದಿನನಿತ್ಯದ ಜೀವನಕ್ಕೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ.

  ಈಗಾಗಲೇ ದಿನಸಿ ಸಾಮಗ್ರಿಗಳು, ಅಡುಗೆ ಅನಿಲ, ತರಕಾರಿ, ಅಡುಗೆ ಎಣ್ಣೆ, ಔಷಧಿಗಳು ಹಾಗೂ ಇತರೆ ಅಗತ್ಯ ವಸ್ತುಗಳ ಖರೀದಿಗೆ ಹೆಚ್ಚಿನ ಹಣ ವ್ಯಯಿಸಬೇಕಾಗಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುತ್ತಿರುವುದರಿಂದ ಬಡ ಕುಟುಂಬಗಳು ತಮ್ಮ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಕುಟುಂಬದ ಮೂಲಭೂತ ಅಗತ್ಯಗಳನ್ನು ಪೂರೈಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

  ಸರ್ಕಾರವು ಜನಸಾಮಾನ್ಯರ ಹಿತದೃಷ್ಟಿಯಿಂದ ಬೆಲೆ ಏರಿಕೆಯನ್ನು ನಿಯಂತ್ರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಹಾವೇರಿ ಜಿಲ್ಲಾ ಘಟಕ ಒತ್ತಾಯಿಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ.

ಮನವಿಯಲ್ಲಿ

1. ಹಾಲಿನ ದರದಲ್ಲಿ ಮಾಡಿರುವ ಹೆಚ್ಚಳವನ್ನು ಮರುಪರಿಶೀಲಿಸಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ದರ ಕಡಿತಗೊಳಿಸಬೇಕು.

2. ಬಸ್ ಪ್ರಯಾಣ ದರ ಹೆಚ್ಚಳವನ್ನು ಮರುಪರಿಶೀಲಿಸಿ ಬಡವರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು.

3. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಶೇಷ ಕ್ರಮ ಕೈಗೊಳ್ಳಬೇಕು.

4. ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು.

5. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸಮರ್ಪಕವಾಗಿ ವಿತರಿಸಬೇಕು.

6. ಕೂಲಿ ಕಾರ್ಮಿಕರು, ಆಟೋ ಚಾಲಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ವಿಶೇಷ ಆರ್ಥಿಕ ನೆರವು ಮತ್ತು ಜನಪರ ಯೋಜನೆಗಳನ್ನು ಜಾರಿಗೊಳಿಸಬೇಕು.

7. ಬೆಲೆ ಏರಿಕೆಯಿಂದ ತೊಂದರೆಗೊಳಗಾಗಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಪರಿಹಾರ ಕಲ್ಪಿಸಬೇಕು.

  ಆದ್ದರಿಂದ ಮಾನ್ಯ ಜಿಲ್ಲಾಧಿಕಾರಿಗಳು ನಮ್ಮ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜನಸಾಮಾನ್ಯರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಭೀಮರಾಜ ದಲಿತ ಸೇವಾ ಸಮಿತಿ (ರಿ), ಬೆಂಗಳೂರು, ಹಾವೇರಿ ಜಿಲ್ಲಾ ಘಟಕದ ವತಿಯಿಂದ ವಿನಮ್ರವಾಗಿ ಮನವಿ ಮಾಡಿದೆ.

  ಈ ಸಂದರ್ಭ ಭೀಮ ರಾಜ್ಯ ದಲಿತ ಸೇವಾ ಸಮಿತಿ ಹಾವೇರಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಪರಶುರಾಮ್ ಗದಗಕರ, ಸುಮಂಗಲ ರಾರಾವಿ, ಗಂಗವ್ವ ಅಂಗಡಿ, ಮಂಜುಳ ಎಸ್. ಬಡಿವಡ್ಡರ, ಮಮತಾ ಹುಣಸಿಮರದ,  ಸರ್ವಕ್ಕ ಮಾಳಗಿ, ಸುಂಕಮ್ಮ ಗೊಲ್ಲರ್, ಇಂಬಾಂಬವ್ವ ದೊಡ್ಡಮನಿ, ಶಾಂತವ್ವ ಪೂಜಾರ್, ಮಾದೇವಕ್ಕ ಗುಂಡಣ್ಣನವರು, ಬಿಬಿ ಜಾನ್ ಕೊಪ್ಪಳ ಮತ್ತಿತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.