ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಎಚ್ಚರಿಕೆ (Rain warning in seven districts of the state from today)
ಸಾಂದರ್ಭಿಕ ಚಿತ್ರ
ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಎಚ್ಚರಿಕೆ
(Bengaluru) ಬೆಂಗಳೂರು, ಫೆಬ್ರವರಿ 2: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಜಿನೊಂದಿಗೆ ಚಳಿ ಮುಂದುವರೆದಿದ್ದು, ಇಂದಿನಿಂದ ಹಲವೆಡೆ ಮಳೆ ಎಚ್ಚರಿಕೆಯನ್ನು ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೇ ಕೆಲವೆಡೆ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಹಲವೆಡೆ ಒಣಹವೆ ಮುಂದುವರೆಯಲಿದೆ.
ಇಂದಿನಿಂದ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ.
ಕರ್ನಾಟಕದಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದಲ್ಲಿ ಕೆಲವೆಡೆ ಶೀತಗಾಳಿ ಮುಂದುವರೆಯಲಿದ್ದು, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೀತ ಗಾಳಿ ಮತ್ತು ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.