• Home  
  • ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Awaded “Malabar Vishwa Sahithya Puraskar – 2024” Award three Senior writers of the State)
- social service

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Awaded “Malabar Vishwa Sahithya Puraskar – 2024” Award three Senior writers of the State)

Share: ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Udupi) ಉಡುಪಿ: ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ (ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್  ಪ್ರದಾನಿಸಿದರು.  ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು […]

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ

(Udupi) ಉಡುಪಿ: ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ (ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್  ಪ್ರದಾನಿಸಿದರು.

 ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗಣಕ ಪಿತಾಮಹ ನಾಡೋಜ ಡಾ. ಕೆ. ಪಿ. ರಾವ್ ವಹಿಸಿದ್ದರು.

ಅವರು ಮಾತನಾಡಿ, ಎಲ್ಲ ಪ್ರಶಸ್ತಿ ಪುರಸ್ಕೃತರು  ಅಭಿನಂದನಾರ್ಹರು. ಸಾಹಿತ್ಯ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಕಾಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ತರಲಿದ್ದು ಇದರ ಕುರಿತು ನಾವು ಎಚ್ಚರದಿಂದ ಇರಬೇಕು ಎಂಬ ಕಿವಿ ಮಾತನ್ನು ಹೇಳಿದರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಉಪಸ್ಥಿತರಿದ್ದರು.

 ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಇದರ ವ್ಯವಸ್ಥಾಪಕರಾದ ಹಫೀಸ್ ರೆಹಮಾನ್  ಉಪಸ್ಥಿತರಿದ್ದರು.​

ಇದೇ ಸಂದರ್ಭದಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ಜಿಲ್ಲಾ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ ಕೊಡವೂರು ಮತ್ತು ಅಂಚೆ ಇಲಾಖೆಯ ಶ್ರೇಷ್ಠ ಪುರಸ್ಕಾರ ಮಾರ್ಕೆಟಿಂಗ್ ಎಕ್ಸಲೆನ್ಸ್ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ ದಂಪತಿಗಳನ್ನು ಗೌರವಿಸಲಾಯಿತು.

 ಉಪಾಧ್ಯಕ್ಷರಾದ ಮಧುಸೂದನ್ ಹೇರೂರು ಸ್ವಾಗತಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪ್ರಸ್ತಾವಿಸಿದರು. ಕೋಶಾಧಿಕಾರಿ  ರಾಜೇಶ್ ಭಟ್ ಪಣಿಯಾಡಿ ನಿರೂಪಿಸಿದರು. ಸಂಚಾಲಕಿ ಸಂಧ್ಯಾ ಶೆಣೈ  ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.