ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಣತಿ ರಾವ್‌ಗೆ ಪ್ರಥಮ ಬಹುಮಾನ
(Dharmathala)ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಆಯೋಜಿಸಿದ ರಾಜ್ಯ ಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಇನ್ನಂಜೆಯ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪ್ರೌಢಶಾಲೆಯ (ಪ್ರಾಥಮಿಕ ವಿಭಾಗದ) ವಿದ್ಯಾರ್ಥಿನಿ ಪ್ರಣತಿ ರಾವ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಪುರಸ್ಕಾರ ಸಮಾರಂಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ , ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ರಾಮಕೃಷ್ಣ ಮಠ, ಸಂಗೀತ ನಿರ್ದೇಶಕ ವಿ. ಮನೋಹರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ಪುರಸ್ಕಾರವನ್ನು ನೀಡಲಾಯಿತು.

