• Home  
  • ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ (Mallikarjun Kharge takes oath as Rajya Sabha member)
- ರಾಜಕೀಯ

ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ (Mallikarjun Kharge takes oath as Rajya Sabha member)

Share: ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ (New Dhelhi) ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು  ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.   ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಖರ್ಗೆ ಅವರ ಈ ನೂತನ ರಾಜಕೀಯ ಹೆಜ್ಜೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಹಿರಿಯ ನಾಯಕರು ಸಾಕ್ಷಿಯಾದರು.   ಅತ್ಯಂತ ವ್ಯವಸ್ಥಿತವಾಗಿ ನಡೆದ […]

(New Dhelhi) ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು  ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.

  ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಖರ್ಗೆ ಅವರ ಈ ನೂತನ ರಾಜಕೀಯ ಹೆಜ್ಜೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಹಿರಿಯ ನಾಯಕರು ಸಾಕ್ಷಿಯಾದರು.

  ಅತ್ಯಂತ ವ್ಯವಸ್ಥಿತವಾಗಿ ನಡೆದ ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದು, ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದರು.

  ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ರಾಧಾ ಬಾಯಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕುಟುಂಬದ ಪರವಾಗಿ ಸಂತಸ ಹಂಚಿಕೊಂಡರು.

  ಕರ್ನಾಟಕದ ಮಟ್ಟಿಗೆ ಈ ಸಮಾರಂಭವು ವಿಶೇಷ ಗಮನ ಸೆಳೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಮಾರಂಭದಲ್ಲಿ ಪಾಲ್ಗೊಂಡು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರ್ನಾಟಕ ಕಾಂಗ್ರೆಸ್ ಪರವಾಗಿ ಆತ್ಮೀಯವಾಗಿ ಶುಭ ಹಾರೈಸಿದರು.

  ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು.

  ಮಲ್ಲಿಕಾರ್ಜುನ ಖರ್ಗೆ ಅವರ ಸಂಸದೀಯ ಅನುಭವವು ಮುಂಬರುವ ದಿನಗಳಲ್ಲಿ ಸದನದಲ್ಲಿ ಪಕ್ಷದ ಧ್ವನಿಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.