ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದ ಹರೀಶ್ ನಾಯಕ್ ಗೆ ಕಾಪು ಕಾಂಗ್ರೆಸ್ ನಿಂದ ಅಭಿನಂದನೆ
ಕಾಪು ರಾಜೀವ ಭವನದಲ್ಲಿ ನಡೆದ ಅಭಿನಂದನಾ ಸಭೆ
(Kaup) ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರ ಸದಸ್ಯ, ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಅಂಡ್ ಇನ್ವೆಸ್ಟ್ ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (COSIDICI ) ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಹರೀಶ್ ನಾಯಕ್ ಕಾಪು ರವರನ್ನು ಕಾಪು ರಾಜೀವ ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರು ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರು ಕಾಪು ಕಾಂಗ್ರೆಸ್ ವತಿಯಿಂದ ಸನ್ಮಾನಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಶ್ರೀಮತಿ ಶಾಂತಲತಾ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

