ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ (Rekha Gupta to be sworn in as Delhi Chief Minister today)

ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ
(New Delhi) ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ.
ಕಳೆದ 12 ದಿನಗಳ ಕಸರತ್ತಿನ ಆಯ್ಕೆಯಲ್ಲಿ ರೇಖಾ ಗುಪ್ತಾರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ.
ಕಳೆದ 27 ವರ್ಷಗಳ ಬಳಿಕ ರಾಜಧಾನಿಯಲ್ಲಿ ಬಹುಮತದೊಂದಿಗೆ ದಿಲ್ಲಿಯಲ್ಲಿ ಅಧಿಕಾರ ಗಿಟ್ಟಿಸಿದ ಬಿಜೆಪಿ ಮಹಿಳಾಮಣಿಗೆ ಹಾಕಿರುವುದು ವಿಶೇಷ.
ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧನಕರ್ ಸಮ್ಮುಖದಲ್ಲಿ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಲಿಮರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಯಿತು.
ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳನ್ನು ಗೆಲ್ಲುವ ಮೂಲಕ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದೇಶದ 14 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಆಡಳಿತವಿದ್ದರೂ, ಎಲ್ಲೂ ಮಹಿಳಾ ಸಿಎಂ ಇರಲಿಲ್ಲ. ದಿಲ್ಲಿಯಲ್ಲಿ ಮಹಿಳಾ ನಾಯಕತ್ವಕ್ಕೆ ಮಣೆ ಹಾಕಿದೆ.