ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜಾಮೀನು ಮಂಜೂರು
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜಾಮೀನು ಮಂಜೂರು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ರೆಗ್ಯೂಲರ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು ಜಾಮೀನು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಪ್ರಕಟಿಸಿದೆ.
ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.
ಈ ಮೂಲಕ 6 ತಿಂಗಳ ಬಳಿಕ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ.