ರೋಟರಿ ಕ್ಲಬ್ ಕೋಟ ಸಿಟಿ ವಾರದ ವಿಶೇಷ ಸಭೆ ಆಯೋಜನೆ (Rotary Club Kota, City special meeting schedule for the week)
ರೋಟರಿ ಕ್ಲಬ್ ಕೋಟ ಸಿಟಿ ವಾರದ ವಿಶೇಷ ಸಭೆ ಆಯೋಜನೆ
ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸಿ – ಪತ್ರಕರ್ತ ರವೀಂದ್ರ ಕೋಟ
(Kota) ಕೋಟ: ಪರಿಸರದ ಬಗ್ಗೆ ಪ್ರತಿಯೊಬ್ಬರೂ ಜಾಗೃತೆ ವಹಿಸುವ ಅವಶ್ಯತೆ ಇದೆ. ಈ ಮೂಲಕ ಮುಂದಿನ ಪೀಳಿಗೆಗಾಗಿ ನಾವೆಲ್ಲರೂ ಗಿಡ ನೆಟ್ಟು, ಪರಿಸರ ಸ್ವಚ್ಛವಾಗಿರಿಸಲು ಪಣತೊಡೋಣ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.
ಕೋಟದ ವಿವೇಕ ವಿದ್ಯಾಸಂಸ್ಥೆಯ ಸ್ವರ್ಣ ಭವನದಲ್ಲಿ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ವಾರದ ವಿಶೇಷ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಅತಿಯಾಗಿ ಬಳಕೆ ಮಾಡುತ್ತಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳಿಂದ ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಎದುರಿಸುತ್ತಿದ್ದೇವೆ. ಹಚ್ಚ ಹಸುರಿನ ಪ್ರಕೃತಿಯನ್ನು ಪ್ರವಾಸೋದ್ಯಮದ ನೆಪದಲ್ಲಿ ಹಾಳುಗೆಡವುತ್ತಿದ್ದೇವೆ. ಇದರಿಂದ ಪ್ರಸ್ತುತ ತಾಪಮಾನ, ಪ್ರಾಕೃತಿಕ ವಿಕೋಪಗಳನ್ನು ಎದುರಿಸುವಂತಾಗಿದೆ. ಇದೇ ರೀತಿ ಮುಂದುವರೆದರೆ, ನಮ್ಮ ಅವನತಿ ಕಟ್ಟಿಟ್ಟ ಬುತ್ತಿ ಎಂದರಲ್ಲದೆ, ಪರಿಸರಕ್ಕಾಗಿ ಇಂದಿನಿಂದಲೇ ಜಾಗೃತರಾಗೋಣ. ಆ ಮೂಲಕ ಮಾಲಿನ ರಹಿತ ಪರಿಸರ ನಮ್ಮದಾಗಿಸಿಕೊಳ್ಳೋಣ ಎಂದರು.
ಇದೇ ವೇಳೆ ರೋಟರಿ ಕ್ಲಬ್ ವತಿಯಿಂದ ಪತ್ರಕರ್ತ ರವೀಂದ್ರ ಕೋಟರವರನ್ನು ಗೌರವಿಸಲಾಯಿತು.
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಅನಿಲ್ ಸುವರ್ಣ ವಹಿಸಿದ್ದರು.
ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ರೋಟರಿ ಮಾಜಿ ಜಿಲ್ಲಾ ಸಹಾಯಕ ಗರ್ವನರ್ ಸತೀಶ್ ಶೆಟ್ಟಿ, ಮುಂದಿನ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ, ಆನ್ಸ್ ಕ್ಲಬ್ ಅಧ್ಯಕ್ಷೆ ರೇವತಿ ಎಸ್ ನಾಯರಿ, ಮಾಜಿ ಅಧ್ಯಕ್ಷರಾದ ಗಣೇಶ್ ಯು, ವಲಯ ಸೇನಾನಿ ನಿತ್ಯಾನಂದ ನಾಯರಿ, ಗೌರವ ಸದಸ್ಯರಾದ ಲಂಭೋದರ ಹೆಗಡೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಪರಿಚಯಿಸಿ ನಿರೂಪಿಸಿದರು. ಮಾಜಿ ಅಧ್ಯಕ್ಷ ದಯಾನಂದ್ ಆಚಾರ್ ಸ್ವಾಗತಿಸಿ, ನಿರೂಪಿಸಿದರು. ಮಾಜಿ ಅಧ್ಯಕ್ಷ ಸುರೇಶ್ ಆಚಾರ್ ವಂದಿಸಿದರು.