• Home  
  • ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ(Sex scam accuse Prajwal revanna arrested; Medical examination)
- ಅಪರಾಧ

ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ(Sex scam accuse Prajwal revanna arrested; Medical examination)

Share: ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ  (Bengaluru) ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು  ಗುರುವಾರ ತಡರಾತ್ರಿ 12:47ರ ಸುಮಾರಿಗೆ ಬಂಧಿಸಿದ್ದಾರೆ. ಪ್ರಜ್ವಲ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎಸ್‌ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.  ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು […]

ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ

 (Bengaluru) ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು  ಗುರುವಾರ ತಡರಾತ್ರಿ 12:47ರ ಸುಮಾರಿಗೆ ಬಂಧಿಸಿದ್ದಾರೆ.

ಪ್ರಜ್ವಲ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎಸ್‌ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು  ಬಂಧಿಸಿದ್ದಾರೆ.

 ಪ್ರಜ್ವಲ್ ರೇವಣ್ಣ ಏರ್‌ ಪೋರ್ಟ್‌ನಲ್ಲಿ ಪ್ರಕ್ರಿಯೆ ಮುಗಿಸಿ ಹೊರ ಬರುತ್ತಿದ್ದಂತೆ ಮಹಿಳಾ ಇನ್ಸ್‌ ಪೆಕ್ಟರ್‌ ಸಹಿತ ಇನ್ನಿತರ ಮಹಿಳಾ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಎಸ್‌ ಐಟಿ ಕಚೇರಿಗೆ ಕರೆ ತಂದರು.

ಏರ್‌ ಪೋರ್ಟ್‌ನಿಂದ ಎಸ್‌ ಐಟಿ ಕಚೇರಿಗೆ ಕರೆತರುವ ವೇಳೆ ಪೊಲೀಸರ ಬೊಲೆರೊ ವಾಹನದಲ್ಲಿ ಡ್ರೈವರ್‌ ಒಬ್ಬರನ್ನು ಬಿಟ್ಟರೆ ಇನ್ನೆಲ್ಲಾ ಅಧಿಕಾರಿಗಳು ಮಹಿಳೆಯರೇ ಆಗಿದ್ದರು. ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಿ, ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿ ಕರೆ ತಂದಿದ್ದು ವಿಶೇಷವಾಗಿತ್ತು.

 ಎರಡು ಅತ್ಯಾಚಾರ ಪ್ರಕರಣ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಎಸ್‌ ಐಟಿ ಅಧಿಕಾರಿಗಳು ವಿವರಣೆ ನೀಡಲಿದ್ದು, ಹೀಗಾಗಿ ಪ್ರಜ್ವಲ್ ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೂ, ಜಾಮೀನು ಸಿಗೋದು ಬಹುತೇಕ ಅನುಮಾನವಾಗಿದೆ. ಈತನ್ಮಧ್ಯೆ ಎಸ್‌ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಈಗಾಗಲೇ ಪ್ರಜ್ವಲ್ ರೇವಣ್ಣನ ಮೊಬೈಲ್ ಫೋನ್‌ ಅನ್ನು ಎಸ್‌ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ರಿಟ್ರೈವ್‌ ಗೆ ಕಳಿಸಲಿದ್ದಾರೆ. ಇದರ ಜೊತೆಗೆ ಪ್ರಜ್ವಲ್ ರೇವಣ್ಣ ಬಳಿ ದೊರೆತ ದಾಖಲೆಗಳು ಹಾಗೂ ಲಗೇಜ್‌ ಗಳನ್ನು ಪರಿಶೀಲನೆ ನಡೆಸಲಿದ್ದಾರೆ.

 ಇಂದು ಬೆಳಗ್ಗೆಯಿಂದಲೇ ಎಸ್‌ ಐಟಿಯಿಂದ ಪ್ರಜ್ವಲ್ ರೇವಣ್ಣನ ವಿಚಾರಣೆ ಶುರುವಾಗಲಿದ್ದು, ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಿರುವ ಹಿನ್ನಲೆಯಲ್ಲಿ ಪ್ರಾಥಮಿಕ ವಿಚಾರಣೆ ಮುಗಿಸಿಕೊಳ್ಳಲು ತಯಾರಿಯನ್ನು ಈಗಾಗಲೇ ಶುರು ಮಾಡಿದ್ದಾರೆ.

  ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ

   ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ತಡ ರಾತ್ರಿ ಪ್ರಜ್ವಲ್ ಅವರನ್ನು ಬಂಧಿಸಲಾಗಿತ್ತು. ಇಡೀ ರಾತ್ರಿ ಪ್ರಜ್ವಲ್ ಎಸ್ ಐಟಿ ಕಚೇರಿಯಲ್ಲಿ ಕಾಲ ಕಳೆದರು. ವೈದಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಗೇಟ್‌ಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

 ಪ್ರಜ್ವಲ್ ರೇವಣ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅನಾರೋಗ್ಯ ಸಮಸ್ಯೆ ಏನಾದರೂ ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.

  ಪ್ರಜ್ವಲ್  ರೇವಣ್ಣ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಜನ ಸಾಮಾನ್ಯರಿಗೆ ತೊಂದರೆಯಾಗಿದ್ದು, ರೋಗಿಗಳನ್ನು ಆಸ್ಪತ್ರೆಯ ಒಳಗೆ ಬಿಡುತ್ತಿಲ್ಲ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

 ವೈದ್ಯಕೀಯ ಪರೀಕ್ಷೆಯ ನಂತರ ಪ್ರಜ್ವಲ್ ರೇವಣ್ಣ ಅವರನ್ನು  ಮಧ್ಯಾಹ್ನದೊಳಗೆ ಕೋರ್ಟ್‌ಗೆ ಹಾಜರು ಪಡಿಸಲಾಗುತ್ತದೆ. ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯುತ್ತದೆ.

 ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ 2 ಅತ್ಯಾಚಾರ ಪ್ರಕಣಗಳು ದಾಖಲಾಗಿವೆ. ಒಂದೊಂದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಯಲಿದೆ. ಇವತ್ತು ಕೋರ್ಟ್‌ಗೆ ಹಾಜರು ಪಡಿಸಿದ ನಂತರ ಎಸ್‌ ಐಟಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.