ವಿಟಿಯುನಲ್ಲಿ 4ನೇ ರ‍್ಯಾಂಕ್ ಗಳಿಸಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಕುಮಾರಿ ಸಿಂಚನ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿಯ ಸ್ವೀಕರಿಸಿದ ಸಿಂಚನ
(Bantakal) ಬಂಟಕಲ್: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ 2022- 26ನೇ ಸಾಲಿನ ವಿದ್ಯಾರ್ಥಿನಿ ಕುಮಾರಿ ಸಿಂಚನ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 4ನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.
ಈ ಪ್ರತಿಷ್ಠಿತ ಸಾಧನೆಗಾಗಿ ಅವರು ವಿಟಿಯು ನ 26ನೇ ಘಟಿಕೋತ್ಸವದಲ್ಲಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಇದು ವಿದ್ಯಾರ್ಥಿನಿಯ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಂಸ್ಥೆಯ ಗುಣಮಟ್ಟದ ಶಿಕ್ಷಣವನ್ನು ಪ್ರತಿಬಿಂಬಿಸುತ್ತದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

