# Tags
#ರಾಜಕೀಯ

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ರಾಜು ಪೂಜಾರಿ ಗೆಲುವು ಖಚಿತ : ಡಿ. ಆರ್ ರಾಜು ವಿಶ್ವಾಸ (Congress leader Raju Poojaryʼs victory in Vidhana Parishath elections is certain : DR Raju)

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡ ರಾಜು ಪೂಜಾರಿ ಗೆಲುವು ಖಚಿತ : ಡಿ. ಆರ್ ರಾಜು ವಿಶ್ವಾಸ

(Karkala) ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ. ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಅವರು ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜು ಪೂಜಾರಿಯವರು ರಾಜಕಾರಣದಲ್ಲಿ ಸುಧೀರ್ಘ ಅನುಭವ ಹೊಂದಿರುವ ರಾಜಕಾರಣಿ, ಕಾರ್ಕಳದಲ್ಲಿ ಗೋಪಾಲ ಭಂಡಾರಿಯವರಂತಹ ಸರಳ ವ್ಯಕ್ತಿತ್ವದ ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಈ ಬಾರಿ ಅವಕಾಶ ನೀಡಿದೆ. ರಾಜು ಪೂಜಾರಿಯವರು ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಜನ ಪ್ರತಿನಿಧಿಯಾಗಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿಕೊಂಡು ಸ್ಥಳೀಯಾಡಳಿತಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ.

  ಸುಮಾರು 6 ಸಾವಿರ ಮತಗಳ ಪೈಕಿ ಸುಮಾರು 1800 ಮತಗಳು ಕಾಂಗ್ರೆಸ್ ಪಕ್ಷದ ಮತಗಳಿದ್ದು, ಮಾತ್ರವಲ್ಲದೇ ರಾಜು ಪೂಜಾರಿಯವರ ಒಳ್ಳೆಯತನ ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಉಳಿದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಚಲಾವಣೆಯಾಗಲಿವೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅನುದಾನದ ಕೊರತೆಯಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲವೆಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿ. ಆರ್ ರಾಜು ಅವರು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಯಾಪೈಸೆ ಅನುದಾನ ಬಿಡುಗಡೆ ಮಾಡದೇ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಕಾಮಗಾರಿ ಮಾಡಿಸಿದ್ದಾರೆ. ಆದರೆ ಕಾಮಗಾರಿಯ ಬಳಿಕ ಗುತ್ತಿದೆಗಾರರಿಗೆ ಒಂದು ಪೈಸೆ ಅನುದಾನ ಬಿಡುಗಡೆ ಮಾಡಿಲ್ಲವೆಂದು ಆರೋಪಿಸಿದರು.

ಕಸ್ತೂರಿ ರಂಗನ್ ವರದಿ ಜಾರಿಯ ವಿಚಾರವಾಗಿ ಮಾತನಾಡಿದ ಅವರು, ಈ ಯೋಜನೆ ಜಾರಿಯಾದರೆ ಸಾವಿರಾರು ಅರಣ್ಯವಾಸಿ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕೂಡ ಕಸ್ತೂರಿ ರಂಗನ್ ವರದಿ ಜಾರಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದರು.

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಪ್ರಮುಖವಾಗಿ ಸ್ಥಳೀಯ ಮಟ್ಟದ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಇಚ್ಚಾಶಕ್ತಿ ಹಾಗೂ ಬದ್ಧತೆ ಕೊರತೆಯಿಂದ ಈ ಸಮಸ್ಯೆ ಉದ್ಭವಿಸಿದೆ. ಅಂದು ಕಸ್ತೂರಿ ರಂಗನ್ ವರದಿ ಜಾರಿಯ ಕುರಿತು ಚಕಾರ ಎತ್ತದೇ ಈ ಗೊಂದಲಕ್ಕೆ ಎಡೆಮಾಡಿದೆ. ಆದರೆ ಕೇರಳದಲ್ಲಿ ಅಲ್ಲಿನ ಸರ್ಕಾರ ಈ ವರದಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪರಿಣಾಮ ಈ ವರದಿ ಜಾರಿಯನ್ನು ಕೈಬಿಡಲಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪ್ರಭಾಕರ ಬಂಗೇರ, ತಾರಾನಾಥ ಕೋಟ್ಯಾನ್,

ಮಾಜಿ ಪುರಸಭಾ ಅಧ್ಯಕ್ಷ ಸುಬಿತ್ ಏನ್ ಆರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2