• Home  
  •   ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸದಸ್ಯರಾದ ಎಸ್.ಎಲ್ ಭೋಜೇಗೌಡ ಕಾಪು ಹೊಸ ಮಾರಿಗುಡಿ ಭೇಟಿ (Leader of opposition in Legislative Council SL Bhoje Gauda visited Kaup Hosamarigudi)
- ಧಾರ್ಮಿಕ

  ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸದಸ್ಯರಾದ ಎಸ್.ಎಲ್ ಭೋಜೇಗೌಡ ಕಾಪು ಹೊಸ ಮಾರಿಗುಡಿ ಭೇಟಿ (Leader of opposition in Legislative Council SL Bhoje Gauda visited Kaup Hosamarigudi)

Share:   ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸದಸ್ಯರಾದ ಎಸ್.ಎಲ್ ಭೋಜೇಗೌಡ ಕಾಪು ಹೊಸ ಮಾರಿಗುಡಿ ಭೇಟಿ  ಪ್ರಾಚೀನ ದೇಗುಲಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಶಿಲ್ಪಕಲೆ : ಕಾಪು ಹೊಸ ಮಾರಿಗುಡಿ  ಕ್ಷೇತ್ರ (Kaup) ಕಾಪು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ ಮತ್ತು ಅವರ ಪತ್ನಿ ತರ್ಪಣರವರು  ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭ ಸಂದರ್ಭದಲ್ಲಿ ಕಾಪು ಮಾರಿಗುಡಿಗೆ ಆಗಮಿಸಿ ಅಮ್ಮನ ದರ್ಶನ ಪಡೆದರು.  ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ […]

  ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸದಸ್ಯರಾದ ಎಸ್.ಎಲ್ ಭೋಜೇಗೌಡ ಕಾಪು ಹೊಸ ಮಾರಿಗುಡಿ ಭೇಟಿ

 ಪ್ರಾಚೀನ ದೇಗುಲಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಶಿಲ್ಪಕಲೆ : ಕಾಪು ಹೊಸ ಮಾರಿಗುಡಿ  ಕ್ಷೇತ್ರ

(Kaup) ಕಾಪು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ ಮತ್ತು ಅವರ ಪತ್ನಿ ತರ್ಪಣರವರು  ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭ ಸಂದರ್ಭದಲ್ಲಿ ಕಾಪು ಮಾರಿಗುಡಿಗೆ ಆಗಮಿಸಿ ಅಮ್ಮನ ದರ್ಶನ ಪಡೆದರು.

 ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ಶ್ರೀ ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.

 ಈ ಸಂದರ್ಭ ಮಾತನಾಡಿದ ಅವರು, ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದೆ ಎಂದರು.

 ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಅಭಿವೃದ್ಧಿ ಸಮಿತಿಯ ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್, ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.