• Home  
  • ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ (Congratulations to MLC Ivan D́Souza on Hejamadi)
- ರಾಜಕೀಯ

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ (Congratulations to MLC Ivan D́Souza on Hejamadi)

Share: ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ  ಹೆಜಮಾಡಿ: ಎರಡನೇ ಭಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ವತಿಯಿಂದ ಹೆಜಮಾಡಿ ನಾರಾಯಣ ಗುರು ಸಭಾಭವನದಲ್ಲಿ   ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಊರು ಹೆಜಮಾಡಿ. ಹೆಜಮಾಡಿಯಿಂದ ಉದ್ಯಾವರದವರೆಗೆ ನನ್ನ ಅಂದಿನ ರಾಜಕೀಯಕ್ಕೆ ನೀಡಿದ ಅಭೂತಪೂರ್ವ ಶಕ್ತಿ ಇಂದು ನನ್ನನ್ನು ಈ ಮಟ್ಟಕ್ಕೆ ಕೊಂಡೊಯ್ದಿದೆ. ಈ ಭಾಗದ ಅಭಿವೃದ್ಧಿಯಲ್ಲಿ ಕೈಜೋಡಿಸುತ್ತೇನೆ […]

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ

 ಹೆಜಮಾಡಿ: ಎರಡನೇ ಭಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ವತಿಯಿಂದ ಹೆಜಮಾಡಿ ನಾರಾಯಣ ಗುರು ಸಭಾಭವನದಲ್ಲಿ   ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಊರು ಹೆಜಮಾಡಿ. ಹೆಜಮಾಡಿಯಿಂದ ಉದ್ಯಾವರದವರೆಗೆ ನನ್ನ ಅಂದಿನ ರಾಜಕೀಯಕ್ಕೆ ನೀಡಿದ ಅಭೂತಪೂರ್ವ ಶಕ್ತಿ ಇಂದು ನನ್ನನ್ನು ಈ ಮಟ್ಟಕ್ಕೆ ಕೊಂಡೊಯ್ದಿದೆ. ಈ ಭಾಗದ ಅಭಿವೃದ್ಧಿಯಲ್ಲಿ ಕೈಜೋಡಿಸುತ್ತೇನೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಸಾಮಾಜಿಕ ಕಳಕಳಿ ಹೊಂದಿರುವ, ಧ್ವನಿ ಇಲ್ಲದವರ ಧ್ವನಿಯಾಗಿ ಅವರ ಕಷ್ಟಗಳಿಗೆ ಹೆಗಲುಕೊಟ್ಟು ದುಡಿದ ಪ್ರಮಾಣಿಕ ರಾಜಕಾರಣಿ ಐವನ್ ಡಿಸೋಜ ಅವರಿಗೆ ಬದ್ಧತೆ ಹಾಗೂ ಪ್ರಮಾಣಿಕ , ನಿಷ್ಠೆಯ  ಸೇವೆಯಿಂದ  ದ್ವಿತೀಯ ಬಾರಿಗೆ ವಿಧಾನ ಪರಿಷತ್‌ಗೆ ಅಯ್ಕೆಗೊಂಡಿದ್ದಾರೆ. ಕಾಪು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

 ಸಾರ್ವಜನಿಕ ಅಭಿನಂದನಾ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.

ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಕಣ್ಣಂಗಾರ್ ಜುಮ್ಮಾ ಮಸೀದಿ ಧರ್ಮಗುರು ಅಶ್ರಫ್ ಸಖಾಫಿ ಕಿನ್ಯ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಹಂಝ ಮದನಿ ಪುತ್ತೂರು, ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಶ್ಮಾ ಮೆಂಡನ್, ಮಾಜಿ ಅಧ್ಯಕ್ಷೆ ಲಿಡಿಯೋ ಪುರ್ಟಾಡೊ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ವೆ, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜ್ಮಾಡಿ, ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ರಾಲ್ಪಿ ಡಿ ಕೋಸ್ತ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ವಿಶ್ವಾಸ್ ಅಮೀನ್, ದಲಿತ ಮುಖಂಡ ರಾಜು ಹೆಜ್ಮಾಡಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಝೀಜ್ ಹೆಜಮಾಡಿ, ಶಿವಾಜಿ ಸುವರ್ಣ, ಶರ್ಫುದ್ದೀನ್ ಶೇಖ್, ಸುಧೀರ್ ಎಸ್. ಕರ್ಕೇರ ಉಪಸ್ಥಿತರಿದ್ದರು.

ಕೇಶವ ಸಾಲ್ಯಾನ್ ಸ್ವಾಗತಿಸಿದರು. ಶೇಖರ್ ಹೆಜಮಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರ್ವಹಿಸಿದರು. ಸಂತೋಷ್ ಪಡುಬಿದ್ರಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.