• Home  
  • ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ (SMVITM STUDENT WINS GOLD MEDAL IN VTU STATE-LEVEL KARATE CHAMPIONSHIP)
- ಕ್ರೀಡೆ - ಶಾಲಾ ಕಾಲೇಜು - ಸ್ಪರ್ಧೆ

ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ (SMVITM STUDENT WINS GOLD MEDAL IN VTU STATE-LEVEL KARATE CHAMPIONSHIP)

Share: ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಶ್ರೀಶ ಕೆ ಎಸ್ ಆಚಾರ್ಯರವರು ದಿನಾಂಕ 11 ಮತ್ತು 12 ಸೆಪ್ಟೆಂಬರ್ ರಂದು ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ […]

 (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಶ್ರೀಶ ಕೆ ಎಸ್ ಆಚಾರ್ಯರವರು ದಿನಾಂಕ 11 ಮತ್ತು 12 ಸೆಪ್ಟೆಂಬರ್ ರಂದು ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ (60 ಕೆ ಜಿ) ಚಿನ್ನದ ಪದಕ ಪಡೆದಿರುತ್ತಾರೆ.

ಅವರು ದಕ್ಷಿಣ ವಲಯ (ರಾಷ್ಟ್ರಮಟ್ಟದ) ಕರಾಟೆ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕರಾಟೆ ತಂಡವನ್ನು ಪ್ರತಿನಿಧಿಸಲಿದ್ದಾರೆ.

  ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಕಾರ್ಯದರ್ಶಿಗಳಾದ ರತ್ನಕುಮಾರ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ರವರು ಹರ್ಷ ವ್ಯಕ್ತ ಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.