ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ
(Mulki) ಮುಲ್ಕಿ : ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ ದೇವಸ್ಥಾನದ ವತಿಯಿಂದ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ದೇವಸ್ಥಾನದ ನೂತನ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಅಭಿನಂದಿಸಿ, ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪಾ ಭಟ್, ಶಾಂತರಾಮ ಶೆಟ್ಟಿ ತೆಂಗಾಳಿ ಶಶಿಕಲಾ, ನಂದನ ಶೆಟ್ಟಿ, ಮಾಜಿ ಸದಸ್ಯರಾದ ಚಂದ್ರಹಾಸ ಸುವರ್ಣ, ಉದಯಕುಮಾರ್ ಶೆಟ್ಟಿ ಆದಿಧನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

