ಶಿರಸಿ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಐವರು ಮೃತ್ಯು
ಶಿರಸಿ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಸಂಭವಿಸಿದೆ.
ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡು ನಂತರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ
ಮೃತಪಟ್ಟವರು ತಮಿಳುನಾಡು ಮೂಲದವರು ಎಂದು ತಿಳಿಯಲಾಗಿದೆ. ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು, ಆಗ ಈ ಅಪಘಾತ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

