• Home  
  • ಶಿರ್ವ: ಅಪಘಾತದಿಂದ ಮೃತನಾದ ಮಗ, ಆಘಾತದಿಂದ  ತಾಯಿಯೂ ಮೃತ್ಯು (Shirva: Son dies in accident, mother dies of shock)
- ಅಪಘಾತ

ಶಿರ್ವ: ಅಪಘಾತದಿಂದ ಮೃತನಾದ ಮಗ, ಆಘಾತದಿಂದ  ತಾಯಿಯೂ ಮೃತ್ಯು (Shirva: Son dies in accident, mother dies of shock)

Share: ಶಿರ್ವ: ಅಪಘಾತದಿಂದ ಮೃತನಾದ ಮಗ, ಆಘಾತದಿಂದ  ತಾಯಿಯೂ ಮೃತ್ಯು (Shirva) ಶಿರ್ವ :  ಶಿರ್ವದ ಕೊಲ್ಲಬೆಟ್ಟು ಬಳಿ  ಅಪಘಾತದಿಂದ ಮಗನು ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಕ್ಕೊಳಗಾದ ತಾಯಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಘಟಿಸಿದೆ.  ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಮೃತಪಟ್ಟ ಇಂದಿರಾ ಮೂಲ್ಯ (74) ಮೃತರ ತಾಯಿ.  ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ […]

(Shirva) ಶಿರ್ವ :  ಶಿರ್ವದ ಕೊಲ್ಲಬೆಟ್ಟು ಬಳಿ  ಅಪಘಾತದಿಂದ ಮಗನು ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಕ್ಕೊಳಗಾದ ತಾಯಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಘಟಿಸಿದೆ.

 ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಮೃತಪಟ್ಟ ಇಂದಿರಾ ಮೂಲ್ಯ (74) ಮೃತರ ತಾಯಿ.

 ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಢಿಕ್ಕಿ ಹೊಡೆದು ಬೈಕ್ ಸವಾರ ನಿವಾಸಿ ರಮೇಶ್‌ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ.24 ರಂದು ರಾತ್ರಿ ಅವರು ಮೃತಪಟ್ಟಿದ್ದರು.

 ಅಪಘಾತದಿಂದ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ ತೀವ್ರ ಆಘಾತಕ್ಕೊಳಗಾಗಿದ್ದು ಅವರನ್ನು ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ   ಅವರು ಮೃತಪಟ್ಟಿದ್ದಾರೆ. ದಿನದ ಅಂತರದಲ್ಲಿ ತಾಯಿ- ಮಗ ಇಬ್ಬರೂ ಮೃತಪಟ್ಟಿದ್ದಾರೆ.

ಮೃತ ರಮೇಶ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.