ಶಿರ್ವ : ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ, ಪಂಚ ಗ್ಯಾರಂಟಿ ಸಂಭ್ರಮೋತ್ಸವ
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗಣ್ಯರು
(Shirva) ಶಿರ್ವ: ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ಹಾಗೂ ಪಂಚ ಗ್ಯಾರಂಟಿ ಸಂಭ್ರಮೋತ್ಸವವು ಸೋಮವಾರ ಬೆಳಿಗ್ಗೆ ಶಿರ್ವದಲ್ಲಿರುವ ಮಹಿಳಾ ಸೌಧದಲ್ಲಿ ನಡೆಯಿತು.
ಮಾಜಿ ಸಚಿವರಾದ ವಿನಯ್ ಕುಮಾರ ಸೊರಕೆ ಹಾಗೂ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಶಿರ್ವದಲ್ಲಿ ಇದು 29ನೇ ಕಾರ್ಯಕ್ರಮ. ಗೃಹಿಣಿ ಮನೆಯ ಯಜಮಾನಿ. ಅವರ ಕಷ್ಟಕ್ಕೆ ಸ್ಪಂದಿಸುತ್ತಿರುವುದು ಕರ್ನಾಟಕ ಸರಕಾರದ ಮಹತ್ವದ ಯೋಜನೆ.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500 ಮತ್ತು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಇಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಭ್ರಮದ ದಿನವಾಗಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ದೊರೆಯುತ್ತಿರುವ ಪ್ರಯೋಜನಗಳ ಕುರಿತು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್ ಮಾಹಿತಿ ನೀಡಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಲಿ ಮಾತನಾಡಿದರು.
ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಸನಬ್ಬ ಶೇಖ್, ಮಾಜಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ, ಮಾಜಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಗ್ಯಾರಂಟಿ ಸಮಿತಿಯ ಸದಸ್ಯರಾದ ಸುಧೀರ್ ಕುಮಾರ್, ಕೀರ್ತಿ ಕುಮಾರ್, ಲೀನಾ ವಿನಿತ ಡಿಸೋಜ, ಸವಿತಾ ಕುಂದರ್, ಪ್ರಭಾಕರ್ ಆಚಾರ್ಯ, ಗ್ರೇಸಿ ಕಾರ್ಡೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘಟಕರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿಲ್ಸನ್ ರೋಡ್ರಿಗಸ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಗಿಲ್ಬರ್ಟ್ ಪಿಂಟೊ ನಿರೂಪಿಸಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ವಂದಿಸಿದರು.
೦೦೦೦೦೦೦೦೦೦

