ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಮತಿ ಬಬಿತಾ ಜಗದೀಶ್ ಅರಸ್
(Shirva) ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ಆಶ್ರಯದಲ್ಲಿ ಬೆಳ್ಳಣ್ ಯೋಜನಾ ಕಚೇರಿ ಸೂಡ ವಲಯ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶಿರ್ವ ಹಿಂದೂ ಪ್ರೌಢ ಶಾಲೆಯಲ್ಲಿ ಜರಗಿತು.
ಕಾಪು ತಾಲೂಕು ಜನಜಾಗೃತಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಬಬಿತಾ ಜಗದೀಶ್ ಅರಸ್ ಅಧ್ಯಕ್ಷತೆ ವಹಿಸಿದ್ದರು.
ಶಿರ್ವ ಪೊಲೀಸ್ ಠಾಣೆಯ ಎಎಸ್ಐ ಮೋಹನ್ ದಾಸ್ ಮತ್ತು ಹೆಡ್ ಕಾನ್ಸ್ಟೆಬಲ್ ಮಂಜುನಾಥ್ ಅವರು ಮಾದಕ ವ್ಯಸನ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ ಮತ್ತು ಪೊಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ತಮ್ಮ ಸಂದೇಹಗಳಿಗೆ ಉತ್ತರ ಕಂಡು ಕೊಂಡರು.
ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ರಾಜೇಶ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಸಂತಿ ನಾಯ್ಕ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಸುಬ್ರಹ್ಮಣ್ಯ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೇವಾಪ್ರತಿನಿಧಿ ರಜನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

